ಬೆಂಗಳೂರು : ಕಾವೇರಿ ನದಿ ನೀರಿನ ಮಾಲಿನ್ಯ ನಿಯಂತ್ರಣಕ್ಕೆ ತಾಂತ್ರಿಕ ತಜ್ಞರ ಸಮಿತಿ ರಚಿಸಲಾಗಿದೆ. ಈ ಸಮಿತಿ ಕಾವೇರಿ ನದಿ ಮತ್ತು ಲಕ್ಷ್ಮಣ ತೀರ್ಥ ನದಿ ಒಳಗೊಂಡಂತೆ ನೀರಿನ ಮಾಲಿನ್ಯದ ತಡೆಗೆ ತುರ್ತು ಮಾರ್ಗೋಪಾಯಗಳನ್ನು ಕೈಗೊಳ್ಳುವ ಸಂಬಂಧ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವರ ಈಶ್ವರ್ ಖಂಡ್ರೆ ವಿಧಾನ ಪರಿಷತ್ತಿನಲ್ಲಿ ಗುರುವಾರ ತಿಳಿಸಿದರು.
ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಡಾ.ಡಿ. ತಿಮ್ಮಯ್ಯಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಸಮಿತಿ ವರದಿ ಕುರಿತು ಸರ್ಕಾರ ಪರಿಶೀಲಿಸುತ್ತಿದ್ದು, ಅದರ ಅನ್ವಯ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಲಕ್ಷ್ಮಣ ತೀರ್ಥ ನದಿಗೆ ಹುಣಸೂರು ಪಟ್ಟಣದ ಪುರಸಭೆಯ ವ್ಯಾಪ್ತಿಯಲ್ಲಿನ ಕಲುಷಿತ ನೀರು ಸೇರದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು. ತಾಜ್ಯ ಸಂಸ್ಕರಣಾ ಘಟಕವನ್ನು ನಿರ್ಮಿಸಲಾಗುತ್ತಿದೆ. ಪ್ರತಿ ತಿಂಗಳೂ ನೀರಿನ ಗುಣಮಟ್ಟವನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ನದಿ ನೀರು ಕುಡಿಯಲು ಯೋಗ್ಯವಾಗಿದೆ ಎಂದು ದೃಢಪಟ್ಟಿದೆ ಎಂದರು.
ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…