Mysore
27
light rain

Social Media

ಮಂಗಳವಾರ, 04 ಆಗಸ್ಟ್ 2026
Light
Dark

ಹೀಟ್‌ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಕ್ರಮ: ಸಚಿವ ದಿನೇಶ್‌ ಗುಂಡೂರಾವ್‌

ಹುಬ್ಬಳ್ಳಿ: ಬೇಸಿಗೆಯ ಹಿನ್ನೆಲೆಯಲ್ಲಿ ರಣಬಿಸಿಲ ಝಳ ಹೆಚ್ಚಾಗಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೇಸಿಗೆ ಬಿರು ಬಿಸಿಲು ಆರೋಗ್ಯದ ಮೇಲೆ ಪರಿಣಾಮ ಬೀರಲಿದ್ದು, ಎಲ್ಲಾ ಕಡೆ ಮಾರ್ಗಸೂಚಿ ನೀಡಲಾಗಿದೆ.

ಹೀಟ್‌ ಸ್ಟ್ರೋಕ್‌ನಿಂದ ಬರುವವರಿಗೆ ತುರ್ತು ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಎಲ್ಲಾ ಆಸ್ಪತ್ರೆಗಳಲ್ಲಿ ಬೆಡ್‌ ಮೀಸಲು ಇಡಲಾಗಿದೆ. ಈವರೆಗೂ ಅಹಿತಕರ ಘಟನೆ ನಡೆದಿಲ್ಲ ಎಂದು ಹೇಳಿದರು.

 

Tags:
error: Content is protected !!