ಬೆಂಗಳೂರು: ಇದೇ ಏಪ್ರಿಲ್.10ರಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ.
ಅಂದು ಮಹಾವೀರ ಜಯಂತಿ ಇರುವ ಕಾರಣ ಕಸಾಯಿಖಾನೆಯಲ್ಲಿ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.
ಜೈನ ಧರ್ಮದ ಅನುಯಾಯಿಗಳಿಗೆ ಮಹಾವೀರ ಜಯಂತಿ ಬಹಳ ವಿಶೇಷವಾದ ಹಬ್ಬ. ಪ್ರತಿ ವರ್ಷ ಚೈತ್ರ ಮಾಸದ ಶುಕ್ಲಪಕ್ಷದ ತ್ರಯೋದಶಿ ದಿನದಂದು ಮಹಾವೀರ ಜಯಂತಿಯನ್ನು ಆಚರಿಸಲಾಗುತ್ತಿದೆ.
ಈ ವರ್ಷ ಏಪ್ರಿಲ್.10ರಂದು ಆಚರಣೆ ಮಾಡಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಾದ್ಯಂತ ಮಾಂಸ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ.





