ರಾಜ್ಯ

ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್; ಅರ್ಜಿ ಆಹ್ವಾನ

ಬೆಂಗಳೂರು: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಆಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ಇಲಾಖೆಯ ಮಾನ್ಯತಾ ಕಾರ್ಡು (Accriditation Card) , ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2024-25ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್ಗಳನ್ನು ಪಡೆದಿರುವುದಿಲ್ಲ ಎಂದು ರೂ. 100 ರ ಬಾಂಡ್ ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.

ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ ದಿನಾಂಕ: 10-11-2024 ರ ಸಂಜೆ 5:00 ಗಂಟೆಯೊಳಗೆ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳಿಗೆ ಸಲ್ಲಿಸಬೇಕು.

ಲಕೋಟೆಯ ಮೇಲ್ಬಾಗದಲ್ಲಿ “ಪ.ಜಾ ಹಾಗೂ ಪ.ಪಂ.ಮಾಧ್ಯಮ ಮಾನ್ಯತೆ ಪತ್ರಕರ್ತರಿಗೆ ಮೀಡಿಯಾ ಕಿಟ್ ಗಾಗಿ ಅರ್ಜಿ” ಎಂದು ನಮೂದಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

8 mins ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

18 mins ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

31 mins ago

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ನಿಗೂಢ ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲ್ಲೂಕಿನ ಗೌಡನಕಟ್ಟೆಯಲ್ಲಿ ತಾಯಿಯೊಂದಿಗೆ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಮೃತಪಟ್ಟಿವೆ ಎಂದು ತಿಳಿದುಬಂದಿದೆ. ಹುಣಸೂರು…

1 hour ago

ಓದುಗರ ಪತ್ರ: ಅದಲು-ಬದಲು…!

ಓದುಗರ ಪತ್ರ: ಅದಲು-ಬದಲು...! ಬೆಂಗಳೂರಿನಿಂದ ಬೆಳಗಾವಿಗೆ ಬಲುದೂರ ದೂರ ಬಂತು ಚಳಿಗಾಲದ ಅಧಿವೇಶನ ! ವಿಧಾನ ಸೌಧದಿಂದ ಸುವರ್ಣ ಸೌಧಕ್ಕೆ…

1 hour ago

ಓದುಗರ ಪತ್ರ:  ಚರಂಡಿಯಲ್ಲಿ ಕಸ ತೆರವುಗೊಳಿಸಿ

ಮೈಸೂರಿನ ಶ್ರೀರಾಂಪುರ ಬಡಾವಣೆ ಎರಡನೇ ಹಂತದಲ್ಲಿ ಎಸ್‌ಬಿಎಂ ಕಾಲೋನಿಯಲ್ಲಿರುವ ನಂದಿನಿ ಹಾಲಿನ ಕೇಂದ್ರದ ಎದುರಿನ ಚರಂಡಿಯಲ್ಲಿ ಕಸ ಕಡ್ಡಿಗಳು ತುಂಬಿದ್ದು,…

2 hours ago