ರಾಜ್ಯ

ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ 2017 ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭ ದಲ್ಲಿ ಭಾಗವಹಿಸಿ ಮಾತನಾಡಿದರು.

ಅಭಿಪ್ರಾಯಗಳು ವಸ್ತುಸ್ಥಿತಿಯಿಂದ ಕೂಡಿರಬೇಕು. ಅನೇಕ ಬಾರಿ ಊಹಾ ಪತ್ರಿಕೋದ್ಯಮ ಆಗಿರುತ್ತದೆ, ಅದು ಆಗಬಾರದು. ಸತ್ಯ ಅಸತ್ಯಗಳನ್ನು ಪತ್ತೆ ಹಚ್ಚಿ, ಸತ್ಯವನ್ನು ಶೋಧನೆ ಮಾಡುವ ಕಾರ್ಯವನ್ನು ಪತ್ರಿಕೋದ್ಯಮ ಮಾಡಬೇಕು. ಯಾವುದೇ ಕಾರಣಕ್ಕೂ ಒಬ್ಬ ವ್ಯಕ್ತಿಯು ತಪ್ಪು ಮಾಡದಿದ್ದರೂ, ಸುಮ್ಮನೆ ಆರೋಪಗಳನ್ನು ಮಾಡಬಾರದು. ಸರ್ಕಾರದಲ್ಲಿ ಎಲ್ಲವೂ ಸರಿಯಾಗಿರುವುದಿಲ್ಲ ನಿಜ, ಆದರೆ ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜನ ವಿರೋಧಿ ಕಾರ್ಯವನ್ನು ಸರ್ಕಾರ ಮಾಡಿದರೆ ಅದನ್ನೂ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದರು.

ಸಮಾಜದಲ್ಲಿ ಜಾತಿ ವ್ಯವಸ್ಥೆ, ಅಸಮಾನತೆ ಇದೆ. ಸಾಮಾಜಿಕ ಅಸಮಾನತೆ ಬಗ್ಗೆ ಜನರಿಗೆ ತಿಳಿಸುವ ಕಾರ್ಯ ಮಾಡಬೇಕು. ಬಹುಸಂಖ್ಯಾತರಾಗಿರುವ ಜನ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿರುವುದು ಅಸಮಾನತೆಗೆ ಪ್ರಮುಖ ಕಾರಣ. ಇದನ್ನು ನೇರವಾಗಿ ಜನರಿಗೆ ತಿಳಿಸುವ ಪ್ರಯತ್ನದಲ್ಲಿ, ಯಾವುದೇ ರಾಜಿ ಇಲ್ಲದೆ, ಸಾಮಾಜಿಕ ನ್ಯಾಯ ಎಲ್ಲರಿಗೂ ಸಿಕ್ಕಿದೆಯೇ, ಇಲ್ಲವೇ, ಸಮಬಾಳು, ಸಮಪಾಲು ಅನುಷ್ಠಾನಕ್ಕೆ ಬಂದಿದೆಯೇ ಎಂಬುದನ್ನು ಪರಿಶೀಲಿಸಬೇಕು. ಸಾಮಾಜಿಕ ನ್ಯಾಯ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿರಬೇಕಾದ ವಿಚಾರವಲ್ಲ. ಎಲ್ಲರಿಗೂ ದೇಶದ ವ್ಯವಸ್ಥೆಯಲ್ಲಿ ಇನ್ನೂ ಸಹ ಸಮಾನವಾದ ಅವಕಾಶ ಸಿಗದಿರಲು ಕಾರಣಗಳೇನು ಎಂಬ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಧ್ಯಮ ಮಾಡಬೇಕು ಎಂದರು.

ಬಹಳಷ್ಟು ಜನರು ಸಂವಿಧಾನವನ್ನೇ ಓದಿರುವುದಿಲ್ಲ ಇದೇ ಕಾರಣಕ್ಕೆ ನಮ್ಮ ಸರ್ಕಾರ, ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದುವಂತಹ ಕಾರ್ಯಕ್ರಮ ಹಮ್ಮಿಕೊಂಡಿತು ಸಂವಿಧಾನದ ಕರ್ತವ್ಯಗಳನ್ನು, ಹಕ್ಕುಗಳನ್ನು ತಿಳಿದುಕೊಂಡಲ್ಲಿ ಜನರ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಲು ಸಹಾಯಕವಾಗುತ್ತದೆ ಸಂವಿಧಾನದ ಆಶಯಗಳಿಗೆ ಅನುಗುಣವಾಗಿ ಕೆಲಸ ಮಾಡಿದರೆ ಸಮಾಜ, ನಾಡು ದೇಶ ಎಲ್ಲಕ್ಕೂ ಒಳ್ಳೆಯದಾಗುತ್ತದೆ ಎಂದರು.

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

2 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

4 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

5 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

9 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

14 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

14 hours ago