Mysore
23
overcast clouds

Social Media

ಭಾನುವಾರ, 20 ಏಪ್ರಿಲ 2025
Light
Dark

ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಮೀನಾ ತೂಗುದೀಪ್‌ ಭೇಟಿ

ರಾಮನಗರ: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ತಾಯಿ ಮೀನಾ ತೂಗುದೀಪ ಅವರಿಂದು ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಅವರು ಪವಾಡ ಬಸಪ್ಪನ ಆಶೀರ್ವಾದ ಪಡೆದರು.

ಮಗ ದರ್ಶನ್‌ಗೆ ಎದುರಾಗಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಪವಾಡ ಬಸಪ್ಪನ ಬಳಿ ಪ್ರಾರ್ಥನೆ ಮಾಡಿದ ಮೀನಾಗೆ ಬಸಪ್ಪ ಬಲಗಾಲು ನೀಡಿ ಆಶೀರ್ವಾದ ಮಾಡಿದೆ.

ದೇವಾಲಯಕ್ಕೆ ಆಗಮಿಸಿದ್ದ ಮೀನಾ ತೂಗುದೀಪ್‌ ಅವರಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಗೌರವ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಚಾಮುಂಡೇಶ್ವರಿ ನೆಲೆಸಿದ್ದಾಳೆ. ಇಲ್ಲಿ ಎಲ್ಲಾ ಕಡೆ ಪಾಸಿಟಿವ್‌ ಎನರ್ಜಿ ಇದೆ. ಹಾಗಾಗಿ ಇಲ್ಲಿಗೆ ಬಂದು ತಾಯಿಯ ದರ್ಶನ ಪಡೆದಿದ್ದೇನೆ. ಇಲ್ಲಿ ಬರುವ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಒಳ್ಳೆಯದನ್ನು ಮಾಡಲಿ ಎಂದರು.

Tags: