ರಾಮನಗರ: ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾಯಿ ಮೀನಾ ತೂಗುದೀಪ ಅವರಿಂದು ಗೌಡಗೆರೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆ ಗ್ರಾಮದಲ್ಲಿರುವ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹದ ದೇವಾಲಯದಲ್ಲಿ ಮೀನಾ ತೂಗುದೀಪ ಅವರು ಪವಾಡ ಬಸಪ್ಪನ ಆಶೀರ್ವಾದ ಪಡೆದರು.
ಮಗ ದರ್ಶನ್‌ಗೆ ಎದುರಾಗಿರುವ ಸಂಕಷ್ಟಗಳನ್ನು ನಿವಾರಣೆ ಮಾಡುವಂತೆ ಪವಾಡ ಬಸಪ್ಪನ ಬಳಿ ಪ್ರಾರ್ಥನೆ ಮಾಡಿದ ಮೀನಾಗೆ ಬಸಪ್ಪ ಬಲಗಾಲು ನೀಡಿ ಆಶೀರ್ವಾದ ಮಾಡಿದೆ.
ದೇವಾಲಯಕ್ಕೆ ಆಗಮಿಸಿದ್ದ ಮೀನಾ ತೂಗುದೀಪ್ ಅವರಿಗೆ ದೇವಾಲಯದ ಆಡಳಿತ ಮಂಡಳಿಯಿಂದ ಗೌರವ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಚಾಮುಂಡೇಶ್ವರಿ ನೆಲೆಸಿದ್ದಾಳೆ. ಇಲ್ಲಿ ಎಲ್ಲಾ ಕಡೆ ಪಾಸಿಟಿವ್ ಎನರ್ಜಿ ಇದೆ. ಹಾಗಾಗಿ ಇಲ್ಲಿಗೆ ಬಂದು ತಾಯಿಯ ದರ್ಶನ ಪಡೆದಿದ್ದೇನೆ. ಇಲ್ಲಿ ಬರುವ ಎಲ್ಲರಿಗೂ ತಾಯಿ ಚಾಮುಂಡೇಶ್ವರಿ ಒಳ್ಳೆಯದನ್ನು ಮಾಡಲಿ ಎಂದರು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…