Mysore
24
mist

Social Media

ಸೋಮವಾರ, 17 ನವೆಂಬರ್ 2025
Light
Dark

ಜನ ಮೆಚ್ಚಸಿ ವೋಟು ಗಿಟ್ಟಿಸಲು ಮೇಕೆದಾಟು ಪಾದಯಾತ್ರೆ: ಸಿಪಿ ಯೋಗೇಶ್ವರ್

ರಾಮನಗರ: ನಗರದಲ್ಲಿಂದು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ ಪರ ಬೃಹತ್ ಚುನಾವಣಾ ಪ್ರಚಾರ ಸಭೆಯನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ನಾಯಕ ಸಿಪಿ ಯೋಗೇಶ್ವರ್ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮಳೆಯಿಲ್ಲದೆ ಕೆರೆ ಕುಂಟೆಗಳು, ಬೋರ್ ವೆಲ್ ಗಳು ಬತ್ತಿ ಹೋಗಿವೆ, ನೀರಿಗಾಗಿ ಹಾಹಾಕಾರ ಸೃಷ್ಟಿಯಾಗಿದೆ, ರಾಮನಗರವನ್ನು ಉದ್ಧಾರ ಮಾಡುತ್ತೇನೆಂದು ಹೇಳಿದ್ದ ಶಿವಕುಮಾರ್ ಎಲ್ಲಿದ್ದಾರೆ ಎಂದು ಯೋಗೇಶ್ವರ್ ಪ್ರಶ್ನಿಸಿದರು. ಕೇವಲ ಜನರನ್ನು ಮೆಚ್ಚಿಸಲು ಮತ್ತು ವೋಟು ಗಿಟ್ಟಿಸಲು ಶಿವಕುಮಾರ್ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದರು ಎಂದು ಯೋಗೇಶ್ವರ್‌ ಕಿಡಿಕಾರಿದರು.

ಕಾಂಗ್ರೆಸ್ ಪಕ್ಷದ ರಾಕ್ಷಸ ಸಂಸ್ಕೃತಿಯನ್ನು ಸಂಹಾರ ಮಾಡಲೆಂದೇ ದೇವೇಗೌಡ ಮತ್ತು ಪ್ರಧಾನಿ ನರೇಂದ್ರ ಮೋದಿಯವರು ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳನ್ನು ಒಂದುಗೂಡಿಸಿದ್ದಾರೆ ಎಂದರು. ಎರಡು ಪಕ್ಷಗಳ ಕಾರ್ಯಕರ್ತರು ಒಟ್ಟಾಗಿ ದುಡಿಯುತ್ತಿರುವುದರಿಂದ ಸೋಲಿನಿಂದ ತಪ್ಪಿಸಿಕೊಳ್ಳುವುದು ಕಾಂಗ್ರೆಸ್ ಪಕ್ಷಕ್ಕೆ ಸಾಧ್ಯವಿಲ್ಲ ಎಂದು ಅವರು ಹೇಳಿದರು.

Tags:
error: Content is protected !!