ರಾಜ್ಯ

ಆರ್‌ಎಸ್‌ಎಸ್‌ ಕಾರ್ಯಕ್ರಮದಲ್ಲಿ ಮೇಲುಕೋಟೆ ಶಾಸಕ ಭಾಗಿ : ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ!

ಮೈಸೂರು :  ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ.

ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ ನಿಲಯ (ಆರೆಸ್ಸೆಸ್ ಕಾರ್ಯಾಲಯ) ಹೊಸ ಕಟ್ಟಡದ ಗಣಹೋಮ ಮತ್ತು ಶ್ರೀ ರಾಮತಾರಕ ಹೋಮ ಕಾರ್ಯಕ್ರಮದಲ್ಲಿ ಭಾಗವಸಿರುವ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ತನ್ನ ಫೇಸ್ ಬುಕ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ. ಎಸ್ ಪುಟ್ಟರಾಜು ಹಾಗೂ ಸಂಘದ ಪ್ರಮುಖರು ಉಪಸ್ಥಿತರಿದ್ದರು ಎಂದು ಉಲ್ಲೇಖಿಸಿರುವ ದರ್ಶನ್ ಪುಟ್ಟಣ್ಣಯ್ಯ, ಕಾರ್ಯಕ್ರಮದ ಕೆಲವು ಫೋಟೊಗಳನ್ನೂ ಫೇಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ.

ರೈತ ನಾಯಕ, ಮಾಜಿ ಶಾಸಕ ದಿವಂಗತ ಕೆ.ಎಸ್.ಪುಟ್ಟಣ್ಣಯ್ಯರ ಪುತ್ರರಾಗಿರುವ ದರ್ಶನ್ ಪುಟ್ಟಣ್ಣಯ್ಯ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದಕ್ಕೆ ಹಲವರು ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ದರ್ಶನ್ ರ ಫೇಸ್ ಬುಕ್ ಪೋಸ್ಟ್ ಗೆ ಕಮೆಂಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ದರ್ಶನ್ ಪುಟ್ಟಣ್ಣಯ್ಯ ಅಮೆರಿಕದಲ್ಲಿ ಇದ್ದು ತನ್ನ ಹೆಸರಿನ ಮುಂದೆ ಇರುವ ‘ಪುಟ್ಟಣ್ಣಯ್ಯ’ ಅವರ ಹೆಸರಿನ ಘನತೆ ಆದರೂ ಉಳಿಸಬಹುದಿತ್ತು” ಕೆಲವರು ಅಸಮಾಧಾನ ಹೊರ ಹಾಕಿದ್ದಾರೆ.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

6 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

7 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

8 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

11 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

11 hours ago