Mysore
18
clear sky

Social Media

ಗುರುವಾರ, 29 ಜನವರಿ 2026
Light
Dark

ಋತುಚಕ್ರ ರಜೆ: ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿತ್ತು. ಆದರೆ ಈ ಕುರಿತ ತಡೆಯಾಜ್ಞೆ ಮಾರ್ಪಡಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದೆ.

ಋತುಚಕ್ರದ ರಜೆ ಕುರಿತು ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಆದರೆ ಹೈಕೋರ್ಟ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಕೋರಿ ಎಜಿ ಶಶಿಕಿರಣ್‌ ಶೆಟ್ಟಿ ಮೇಲ್ಮನವಿ ಮಾಡಿದ್ದರು.

ಇದನ್ನು ಓದಿ: 482 ಎಕರೆ ಅರಣ್ಯ ಭೂಮಿ ಕಬಳಿಕೆ ಯತ್ನ: ಸಿಐಡಿ ತನಿಖೆ ಕೋರಿ ಸಿಎಂಗೆ ಪತ್ರ ಬರೆದ ಈಶ್ವರ್‌ ಖಂಡ್ರೆ

ರಾಜ್ಯ ಸರ್ಕಾರದ ವಾದ ಕೇಳದೇ ಹೈಕೋರ್ಟ್‌ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದೆ. ಋತುಚಕ್ರ ರಜೆ ಆದೇಶಕ್ಕೆ ಮುನ್ನ ಸರ್ಕಾರ ಕಾನೂನು ಪಾಲಿಸಿದೆ. ಹೀಗಾಗಿ ತಡೆಯಾಜ್ಞೆ ಮಾರ್ಪಡಿಸುವಂತೆ ಅಡ್ವಕೇಟ್‌ ಜನರಲ್‌ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಸರ್ಕಾರದ ವಾದ ಆಲಿಸಿದ ಬಳಿಕವೇ ಅರ್ಜಿ ಬಗ್ಗೆ ಆದೇಶ ನೀಡಲಾಗುವುದು ಎಂದು ಹೇಳಿರುವ ಹೈಕೋರ್ಟ್‌ ತಡೆಯಾಜ್ಞೆ ಮಾರ್ಪಡಿಸಿ ನಾಳೆಗೆ ವಿಚಾರಣೆ ನಿಗದಿಪಡಿಸಿದೆ. ಹೀಗಾಗಿ ಸದ್ಯ ಋತುಚಕ್ರ ರಜೆ ಆದೇಶಕ್ಕೆ ತಡೆಯಾಜ್ಞೆಯಿಲ್ಲ ಎಂದು ತಿಳಿದುಬಂದಿದೆ.

Tags:
error: Content is protected !!