ರಾಜ್ಯ

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆಯನ್ನು ಏಕಸದಸ್ಯ ನ್ಯಾಯಪೀಠವೊಂದು ಕೆಲವೇ ಗಂಟೆಗಳ ಅಂತರದಲ್ಲಿ ತೆರವುಗೊಳಿಸಿದ ಅಪರೂಪದ ಘಟನೆಗೆ ಕರ್ನಾಟಕ ಹೈಕೋರ್ಟ್ ಸಾಕ್ಷಿಯಾಯಿತು.

ಸರ್ಕಾರದ ಅಧಿಸೂಚನೆ ಪ್ರಶ್ನಿಸಿ, ಬೆಂಗಳೂರು ಹೋಟೆಲುಗಳ ಸಂಘ ದ ಅಧ್ಯಕ್ಷ ಎಚ್.ಎಸ್.ಸುಬ್ರಹ್ಮಣ್ಯ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಬೆಳಗಿನ ಕಲಾಪದಲ್ಲಿ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಕೆ.ಪ್ರಶಾಂತ್ ಕುಮಾರ್ ಅವರ ವಾದ ಆಲಿಸಿದ ನ್ಯಾಯಪೀಠ, ಅಽಸೂಚನೆಗೆ ಮಧ್ಯಂತರ ತಡೆ ನೀಡಿತು. ರಾಜ್ಯ ಸರ್ಕಾರ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಹೊಂದಿದೆ ಎಂದು ಆದೇಶಿಸಿ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನು ಓದಿ: ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಈ ತಡೆ ಆದೇಶ ಹೊರಬೀಳುತ್ತಿದ್ದಂತೆಯೇ, ಕಲಾಪ ಕೊನೆಗೊಳ್ಳುವ ಸಮಯದಲ್ಲಿ ಅಡ್ವೊಕೇಟ್ ಜನರಲ್ ಶಶಿಕಿರಣ ಶೆಟ್ಟಿ, ಹೆಚ್ಚುವರಿ ಅಡ್ವೊಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಹಾಗೂ ಮಧ್ಯಂತರ ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ರವಿವರ್ಮ ಕುಮಾರ್ ನ್ಯಾಯಪೀಠದ ಮುಂದೆ ಹಾಜರಾಗಿ, ಪ್ರತಿವಾದಿಗಳ ಆಕ್ಷೇಪಣೆ ಆಲಿಸದೇ ಅರ್ಜಿದಾರರ ಮಧ್ಯಂತರ ಅದೇಶ ಮಾನ್ಯ ಮಾಡಲಾಗಿದೆ ಎಂದು ಆದೇಶಕ್ಕೆ ತೀವ್ರ ತಕರಾರು ವ್ಯಕ್ತಪಡಿಸಿದರು.

ನ್ಯಾಯಪೀಠದ ಮಧ್ಯಂತರ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ ಶಶಿಕಿರಣ ಶೆಟ್ಟಿ ಅವರು, ಋತುಚಕ್ರದ ರಜೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೀತಿ ರೂಪಿಸಬೇಕು ಎಂದು ಸುಪ್ರೀಂ ಕೋರ್ಟ್ ಪ್ರಕರಣವೊಂದರಲ್ಲಿ ಆದೇಶಿಸಿದೆ. ಇದಕ್ಕೆ ಅನುಗುಣವಾಗಿಯೇ ರಾಜ್ಯ ಕಾನೂನು ಆಯೋಗ ಶಿಫಾರಸು ಮಾಡಿದೆ. ಇದನ್ನೆಲ್ಲಾ ಪರಿಗಣಿಸಿಯೇ, ರಾಜ್ಯ ಸರ್ಕಾರ ಸಾಂವಿಧಾನಿಕವಾಗಿ ಕೊಡಮಾಡಲಾಗಿರುವ ೧೪೨ನೇ ವಿಧಿಯಡಿ ತನ್ನ ಅಽಕಾರ ಬಳಸಿ ಈ ಕ್ರಮ ಕೈಗೊಂಡಿದೆ. ಅಧಿಸೂಚನೆ ಕಾನೂನು ಬದ್ಧವಾಗಿಯೇ ಇದೆ. ಹೀಗಿರುವಾಗ, ಸರ್ಕಾರದ ವಿಸ್ತ ತ ವಾದ ಆಲಿಸದೆಯೇ ಅಽಸೂಚನೆಗೆ ತಡೆ ನೀಡಿರುವುದು ಸಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿ ತಡೆ ತೆರವುಗೊಳಿಸುವಂತೆ ಮನವಿ ಮಾಡಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಬೆಳಿಗ್ಗೆಯಷ್ಟೇ ಸರ್ಕಾರದ ಅಧಿಸೂಚನೆಗೆ ನೀಡಿದ್ದ ತನ್ನದೇ ತಡೆಯಾಜ್ಞೆ ಆದೇಶವನ್ನು ಹಿಂಪಡೆಯಿತು. ಬುಧವಾರ (ಡಿ.೧೦) ಉಭಯ ಪಕ್ಷಕಾರರ ವಾದ ಆಲಿಸಿ, ಮಧ್ಯಂತರ ತಡೆ ಆದೇಶದ ಬಗ್ಗೆ ಸೂಕ್ತ ನಿರ್ಣಯ ಹೊರಡಿಸಲಾಗುವುದು ಎಂದು ತಿಳಿಸಿತು.

ಅರ್ಜಿಯಲ್ಲಿ ಏನಿದೆ..?
ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ಮಟ್ಟಿಗೆ ವೇತನ ಸಹಿತ ಮುಟ್ಟಿನ ರಜೆ ಒದಗಿಸಬೇಕು ಎಂದು ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ೨೦೨೫ರ ನವೆಂಬರ್ ೨೦ರಂದು ಅಧಿಸೂಚನೆ ಹೊರಡಿಸಿತ್ತು. ಇದು ಸಂವಿಧಾನದ ೧೪ನೇ ವಿಧಿಗೆ ವಿರುದ್ಧವಾಗಿದ್ದು ರದ್ದುಗೊಳಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

17 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

17 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

18 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

19 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

19 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

22 hours ago