ಬೆಂಗಳೂರು: ‘ಡಿಕೆ ಶಿವಕುಮಾರ್ ಅವರದ್ದು ಬಂಡೆ ಹೃದಯವಲ್ಲ, ಹೂವಿನ ಹೃದಯ. ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುತ್ತಾರೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಶ್ರಮಕ್ಕೆ ಕೇವಲ ಬಾಯಿಮಾತಿನ ಅನುಕಂಪ ಸಾಕಾಗುವುದಿಲ್ಲ. ಅವರ ಬೇಡಿಕೆ ಈಡೇರಿಸುವುದು ನಮ್ಮೆಲ್ಲರ ಕರ್ತವ್ಯ ಎಂದಿದ್ದಾರೆ.
ತಿಂಗಳಿಗೆ ಏಳೆಂಟು ಸಾವಿರ ರೂಪಾಯಿಯಿಂದ ಬದುಕು ಸಾಗಿಸುವುದು ಕಷ್ಟ. ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದಂತೆ ಗೌರವಧನವನ್ನು ₹15 ಸಾವಿರಕ್ಕೆ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ.
‘ಭಾರತ್ ಜೋಡೋ ಸಂಘಕ್ಕೆ ಸಾವಿರ ಕೋಟಿ ರೂಪಾಯಿ ಘೋಷಿಸಿದ ಮುಖ್ಯಮಂತ್ರಿಗಳಿಗೆ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದು ಯಾವ ಲೆಕ್ಕ?’ ಎಂದು ಪ್ರಶ್ನಿಸಿದ್ದಾರೆ.
ಚಳಿಯಲ್ಲಿ ಮಕ್ಕಳೊಂದಿಗೆ ಧರಣಿ ನಡೆಸುತ್ತಿರುವ ಕಾರ್ಯಕರ್ತೆಯರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಜಪಾನ್ ಪ್ರವಾಸದಿಂದ ಮರಳಿದ ಕೂಡಲೇ ಮುಖ್ಯಮಂತ್ರಿಗಳು ಬೇಡಿಕೆ ಈಡೇರಿಸುತ್ತಾರೆ ಎಂಬುದು ತಮ್ಮ ಅಭಿಪ್ರಾಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನವದೆಹಲಿ: ನೀವು ಖರೀದಿಸುವ ಬಾಟಲಿ ನೀರಿನ ಗುಣಮಟ್ಟ ಹೇಗಿದೆ? ಬಿಸ್ಲೆರಿ ನೀರಿನ ವಿವಾದದ ಬೆನ್ನಲ್ಲೇ, ವಿವಿಧ ಬ್ರ್ಯಾಂಡ್‌ಗಳ ಪ್ಯಾಕೇಜ್ಡ್ ಕುಡಿಯುವ…
ಬೆಂಗಳೂರು: ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಹೋರಾಟ ಏಳನೇ ದಿನಕ್ಕೆ ಕಾಲಿಟ್ಟಿದೆ.…
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದಲ್ಲಿ ಗಂಡಾನೆಯ ಕಳೇಬರ ಪತ್ತೆಯಾಗಿದೆ. ಕುಂದುಕೆರೆ ಗಸ್ತಿನ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ…
ಜಗಜ್ಯೋತಿ ಬಸವೇಶ್ವರರನ್ನು ಅವಮಾನಿಸುವ ಕೃತಿ ‘ಬಸವ ಮಂಟಪ’ ಈಗ ವಿವಾದವನ್ನು ಎಬ್ಬಿಸಿದೆ. ಈ ಕೃತಿಯ ಲೇಖಕ ರವಿ ಹಂಜ್ ಹಾಗೂ…
ಎ.ಬಿ.ಇಬ್ರಾಹಿಂ, ಮೈಸೂರು ನಗರಪಾಲಿಕೆ ಮಾಜಿ ಆಯುಕ್ತರು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ದಸರಾ ವಾಣಿಜ್ಯೀಕರಣಕ್ಕೆ ಕಡಿವಾಣ ಹಾಕಿ ಮೈಸೂರಿನ ಬ್ರಾಂಡ್…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯದ ಎನ್‌ಡಿಎ ನಾಯಕರಿಗೆ ದಿಲ್ಲಿಯ ಬಿಜೆಪಿ ಪಾಳೆಯದಿಂದ ಸಂದೇಶ ದಿಲ್ಲಿಯ ಬಿಜೆಪಿ…