ಬೆಳಗಾವಿ: ಬೆಳಗಾವಿ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸಿದ್ದು, ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇಂದಿನಿಂದ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಇದರ ನಡುವೆ ಅಧಿವೇಶನ ವಿರೋಧಿಸಿ ಎಂಇಎಸ್ ಪುಂಡರು ಹಾಮೇಳಾವ್ ಆಯೋಜನೆ ನಡೆಸಲು ಸಿದ್ಧತೆ ನಡೆಸಿದ್ದರು. ಅಲ್ಲದೇ ವ್ಯಾಕ್ಸಿನ್ ಸೆಂಟರ್‌ಗೆ ನುಗ್ಗಲು ಯತ್ನಿಸಿದ್ದರು. ಈ ಸಂದರ್ಭದಲ್ಲಿ ಹಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಇನ್ನು ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ 84ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆ ನಡೆಸಲು ನಿರ್ಧರಿಸಿವೆ. ಧರಣಿ, ಪ್ರತಿಭಟನೆಗಳಿಗೆ ಬೆಳಗಾವಿಯ ಸುವರ್ಣ ಗಾರ್ಡನ್ ಬಳಿ ತಾತ್ಕಾಲಿಕ ಟೆಂಟ್ ನಿರ್ಮಾಣ ಮಾಡಲಾಗಿದೆ.
ರೈತರು, ವಿದ್ಯಾರ್ಥಿಗಳು, ಆಶಾ ಕಾರ್ಯಕರ್ತೆಯರು, ಉಪನ್ಯಾಸಕರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ, ಬೆಳಗಾವಿ ಜಿಲ್ಲೆ ವಿಭಜನೆ ಸೇರಿದಂತೆ ಹಲವು ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಹೋರಾಟ ನಡೆಸಲು ಸಂಘಟನೆಗಳು ಮುಂದಾಗಿವೆ. ಪೊಲೀಸರು ಕೂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳದಂತೆ ಅಲರ್ಟ್ ಆಗಿದ್ದಾರೆ.





