ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯ ಪ್ರಮಾಣ ಹೆಚ್ಚಾಗಿದೆ. ಈ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸಾಧಾರಣ ಮಳೆಯಾಗಿತ್ತು. ಇಂದು ಮುಂಜಾನೆಯಿಂದಲೇ ತುಂತುರು ಮಳೆ ಶುರುವಾಗಿದೆ. ಚಳಿ, ಶೀತ, ಗಾಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.
ಇದನ್ನು ಓದಿ: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಏನದು ಗೊತ್ತಾ?
ದಕ್ಷಿಣ ಒಳನಾಡಿನ ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…