Mysore
19
clear sky

Social Media

ಬುಧವಾರ, 17 ಡಿಸೆಂಬರ್ 2025
Light
Dark

ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ದರ ಏರಿಕೆ: ಬಿ.ವೈ.ವಿಜಯೇಂದ್ರ ಆಕ್ರೋಶ

ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್‌ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. ಆಸ್ತಿ ಗೈಡೆನ್ಸ್‌ ಮೌಲ್ಯವು ಶೇಕಡಾ.30ರಷ್ಟು ಏರಿಕೆ ಕಂಡಿದೆ. ವಾಹನಗಳ ನೋಂದಣಿ ದರವು ಶೇಕಡಾ.10ರಷ್ಟು ಜಾಸ್ತಿ ಆದರೆ, ಆಸ್ಪತ್ರೆಗಳ ಸೇವಾ ಶುಲ್ಕ ಶೇಕಡಾ.5ರಷ್ಟು ಏರಿದೆ. ವಿದ್ಯುತ್‌ ದರವು ಶೇಕಡಾ.14.5ರಷ್ಟು ಜಾಸ್ತಿಯಾಗಿದೆ. ನೀರಿನ ದರವು ಶೇಕಡಾ.30ರಷ್ಟು ಏರಿಕೆಯಾಗಿದೆ. ಹಾಲಿನ ದರ ಶೇಕಡಾ.15ರಷ್ಟು ಹೆಚ್ಚಾಗಿದೆ ಎಂದು ಟೀಕೆ ಮಾಡಿದರು.

ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲಲಿ ರೂ, 1,90,000 ಕೋಟಿ ಸಾಲ ಮಾಡಿದೆ ಎಂಬುದನ್ನು ನಾಡಿನ ಜನರು ಗಮನಿಸಬೇಕಿದೆ. ವಿವಿಧ ಸರ್ಕಾರಿ ಇಲಾಖೆಗಳ ಆರು ಸಾವಿರ ಕೋಟಿ ವಿದ್ಯುತ್‌ ಬಿಲ್‌ ಬಾಕಿ ಇದ್ದು, ಅದರ ವಸೂಲಿ ಕುರಿತು ಸಂಬಂಧಿತ ಸಚಿವರ ಜೊತೆ ಚರ್ಚಿಸಿದ್ದಾಗಿ ಇಂಧನ ಸಚಿವ ಜಾರ್ಜ್‌ ಅವರೇ ಹೇಳಿದ್ದಾರೆ. ಸಂಬಳ ಕೊಡಲಾಗದ ವಿದ್ಯುತ್‌ ಬಿಲ್‌ ಭರಿಸಲಾರದ ದಾರುಣ ಸ್ಥಿತಿಗೆ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನು ಬಸ್ಸಿನ ಪ್ರಯಾಣದರವು ಶೇಕಡಾ.15ರಷ್ಟು ಹೆಚ್ಚಾಗಿದೆ. ಮೆಟ್ರೋ ಪ್ರಯಾಣ ದರ ಗರಿಷ್ಠ ಏರಿಕೆ ಒಂದು ದುಸ್ಸಾಹಸ. ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ಪ್ರಯಾಣ ದರ ಗರಿಷ್ಠ ಮಟ್ಟಕ್ಕೆ ಏರಿಸಿದ್ದಾರೆ ಎಂದು ದೂರಿದರು. ಚೆನ್ನೈ, ಲಕ್ನೋ, ಮುಂಬೈ, ಕೋಲ್ಕತ್ತಾ, ದೆಹಲಿಯಲ್ಲಿ ಮೆಟ್ರೋ ದರ ಏರಿಕೆ ಆಗಿಲ್ಲ. ರಾಜ್ಯ ಸರ್ಕಾರದ ಆಗ್ರಹದಿಂದ ಇಲ್ಲಿ ಹೀಗಾಗಿದೆ ಎಂದು ಕಿಡಿಕಾರಿದರು.

Tags:
error: Content is protected !!