ಬೆಂಗಳೂರು: ಎಲ್ಲಾ ರಂಗದಲ್ಲೂ ದರ ಹೆಚ್ಚಿಸಿದ ಕೀರ್ತಿ ಕಾಂಗ್ರೆಸ್ ಸರ್ಕಾರಕ್ಕೆ ಸಲ್ಲುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ಆಸ್ತಿ ನೋಂದಣಿ ಶುಲ್ಕವು ಶೇಕಡಾ.60ರಷ್ಟು ಏರಿಕೆಯಾಗಿದೆ. ಆಸ್ತಿ ಗೈಡೆನ್ಸ್ ಮೌಲ್ಯವು ಶೇಕಡಾ.30ರಷ್ಟು ಏರಿಕೆ ಕಂಡಿದೆ. ವಾಹನಗಳ ನೋಂದಣಿ ದರವು ಶೇಕಡಾ.10ರಷ್ಟು ಜಾಸ್ತಿ ಆದರೆ, ಆಸ್ಪತ್ರೆಗಳ ಸೇವಾ ಶುಲ್ಕ ಶೇಕಡಾ.5ರಷ್ಟು ಏರಿದೆ. ವಿದ್ಯುತ್ ದರವು ಶೇಕಡಾ.14.5ರಷ್ಟು ಜಾಸ್ತಿಯಾಗಿದೆ. ನೀರಿನ ದರವು ಶೇಕಡಾ.30ರಷ್ಟು ಏರಿಕೆಯಾಗಿದೆ. ಹಾಲಿನ ದರ ಶೇಕಡಾ.15ರಷ್ಟು ಹೆಚ್ಚಾಗಿದೆ ಎಂದು ಟೀಕೆ ಮಾಡಿದರು.
ಸಿದ್ದರಾಮಯ್ಯ ಸರ್ಕಾರ ಎರಡು ವರ್ಷದಲಲಿ ರೂ, 1,90,000 ಕೋಟಿ ಸಾಲ ಮಾಡಿದೆ ಎಂಬುದನ್ನು ನಾಡಿನ ಜನರು ಗಮನಿಸಬೇಕಿದೆ. ವಿವಿಧ ಸರ್ಕಾರಿ ಇಲಾಖೆಗಳ ಆರು ಸಾವಿರ ಕೋಟಿ ವಿದ್ಯುತ್ ಬಿಲ್ ಬಾಕಿ ಇದ್ದು, ಅದರ ವಸೂಲಿ ಕುರಿತು ಸಂಬಂಧಿತ ಸಚಿವರ ಜೊತೆ ಚರ್ಚಿಸಿದ್ದಾಗಿ ಇಂಧನ ಸಚಿವ ಜಾರ್ಜ್ ಅವರೇ ಹೇಳಿದ್ದಾರೆ. ಸಂಬಳ ಕೊಡಲಾಗದ ವಿದ್ಯುತ್ ಬಿಲ್ ಭರಿಸಲಾರದ ದಾರುಣ ಸ್ಥಿತಿಗೆ ತಲುಪಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇನ್ನು ಬಸ್ಸಿನ ಪ್ರಯಾಣದರವು ಶೇಕಡಾ.15ರಷ್ಟು ಹೆಚ್ಚಾಗಿದೆ. ಮೆಟ್ರೋ ಪ್ರಯಾಣ ದರ ಗರಿಷ್ಠ ಏರಿಕೆ ಒಂದು ದುಸ್ಸಾಹಸ. ರಾಜ್ಯ ಸರ್ಕಾರದ ಒತ್ತಾಯದ ಮೇರೆಗೆ ಮೆಟ್ರೋ ಪ್ರಯಾಣ ದರ ಗರಿಷ್ಠ ಮಟ್ಟಕ್ಕೆ ಏರಿಸಿದ್ದಾರೆ ಎಂದು ದೂರಿದರು. ಚೆನ್ನೈ, ಲಕ್ನೋ, ಮುಂಬೈ, ಕೋಲ್ಕತ್ತಾ, ದೆಹಲಿಯಲ್ಲಿ ಮೆಟ್ರೋ ದರ ಏರಿಕೆ ಆಗಿಲ್ಲ. ರಾಜ್ಯ ಸರ್ಕಾರದ ಆಗ್ರಹದಿಂದ ಇಲ್ಲಿ ಹೀಗಾಗಿದೆ ಎಂದು ಕಿಡಿಕಾರಿದರು.
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…
ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…
ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…
ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…