Mysore
25
haze

Social Media

ಶನಿವಾರ, 06 ಡಿಸೆಂಬರ್ 2025
Light
Dark

ನಮ್ಮ ಮೆಟ್ರೋ ದರ ಏರಿಕೆ: ರಾಜ್ಯ ಸರ್ಕಾರದ ವಿರುದ್ಧ ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅಶೋಕ್‌ ಅವರು, ಪೆಟ್ರೋಲ್‌, ಡೀಸೆಲ್‌, ಹಾಲು, ಬಸ್‌ ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಾಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್‌ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನು ಏಕಾಏಕಿ 50% ಏರಿಕೆ ಮಾಡಿದೆ. ಇದರಿಂದ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು, ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್‌, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.

ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.

ಈ ಕೂಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.

 

Tags:
error: Content is protected !!