ಬೆಂಗಳೂರು: ರಾಜ್ಯ ಸರ್ಕಾರ ಜನಸಾಮಾನ್ಯರ ಗಾಯದ ಮೇಲೆ ಮತ್ತೊಂದು ಬರೆ ಎಳೆದಿದೆ ಎಂದು ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಪಕ್ಷ ನಾಯಕ ಆರ್.ಅಶೋಕ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಅವರು, ಪೆಟ್ರೋಲ್, ಡೀಸೆಲ್, ಹಾಲು, ಬಸ್ ದರ ಏರಿಕೆಯ ಬರೆಯಿಂದ ಈಗಾಗಲೇ ಹೈರಾಣಾಗಿರುವ ರಾಜ್ಯದ ಜನತೆಗೆ ಕಾಂಗ್ರೆಸ್ ಸರ್ಕಾರ ಬೆಂಗಳೂರು ಮೆಟ್ರೋ ದರವನ್ನು ಏಕಾಏಕಿ 50% ಏರಿಕೆ ಮಾಡಿದೆ. ಇದರಿಂದ ಜನಸಾಮಾನ್ಯರಿಗೆ ಈಗ ಮೆಟ್ರೋ ಸಂಚಾರ ಕೈಗೆಟುಕದ ಪರಿಸ್ಥಿತಿ ಎದುರಾಗಿದ್ದು, ಮೆಟ್ರೋ ಪ್ರಯಾಣಕ್ಕಿಂತ ಸ್ವಂತ ಸ್ಕೂಟರ್, ಬೈಕಿನ ಪ್ರಯಾಣ ಜೇಬಿಗೆ ಹಿತ ಎನ್ನುವಂತಾಗಿದೆ.
ಸಾರ್ವಜನಿಕ ಸಾರಿಗೆಯನ್ನು ಪ್ರೋತ್ಸಾಹಿಸಿ, ಬೆಂಗಳೂರಿನ ಟ್ರಾಫಿಕ್ ಸಮಸ್ಯೆ, ಪರಿಸರ ಮಾಲಿನ್ಯಕ್ಕೆ ಪರಿಹಾರ ಕಂಡುಕೊಳ್ಳಬೇಕಾದ ಸರ್ಕಾರ ಜನರನ್ನು ಮೆಟ್ರೋದಿಂದ ವಿಮುಖರಾಗುವಂತೆ ಮಾಡುತ್ತಿದೆ.
ಈ ಕೂಡಲೇ ಮೆಟ್ರೋ ದರ ಏರಿಕೆಯ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು.
ಹೊಸದಿಲ್ಲಿ : 4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶಗಳ ವಿಧಾನಸಭಾ ಚುನಾವಣೆ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗ(ಇಸಿಐ) ಅಧಿಕೃತವಾಗಿ…
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…