Mysore
23
overcast clouds

Social Media

ಸೋಮವಾರ, 16 ಮಾರ್ಚ್ 2026
Light
Dark

ಮೆಟ್ರೋ ಜವಬ್ದಾರಿ ರಾಜ್ಯ ಸರ್ಕಾರದ್ದು: ಅಶ್ವಿನಿ ವೈಷ್ಣವ್‌

ಬೆಂಗಳೂರು: ಮೆಟ್ರೋ ಯೋಜನೆಗಳು ರಾಜ್ಯ ಸರ್ಕಾರದ ಅಧೀನದಲ್ಲಿ ಬರುತ್ತವೆ. ಅದರ ಜವಬ್ದಾರಿ ರಾಜ್ಯಕ್ಕೆ ಬಿಟ್ಟಿದ್ದು ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ತಿಳಿಸಿದ್ದಾರೆ.

ಇಂದು (ಫೆ.15) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೆಟ್ರೋ ಪ್ರಯಾಣದ ಟಿಕೆಟ್‌ ದರ ಏರಿಕೆಗೆ ರಾಜ್ಯ ಸರ್ಕಾರವೇ ಹೊಣೆ, ನಾವೂ ಏರಿಕೆ ಮಾಡಿದ್ದೇವೆ ಎನ್ನುವುದು ತಪ್ಪು. ದರ ಏರಿಕೆ ಸಮಿತಿ ಇರುವುದು ದೆಹಲಿಯಲ್ಲಿ ಅಲ್ಲ, ಕರ್ನಾಟಕದಲ್ಲಿ ಎಂದು ಹೇಳಿದರು.

ಇದು ಕರ್ನಾಟಕ ಮಾತ್ರವಲ್ಲ, ಚೆನ್ನೈ, ದೆಹಲಿ, ಹೈದರಾಬಾದ್‌, ಮುಂಬೈಗಳಲ್ಲೂ ಇದೇ ರೀತಿಯಾಗಿದೆ ಎಂದರು.

ಮೆಟ್ರೋ ಸಂಬಂಧ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕಿದೆ. ದರ ಏರಿಕೆ ಪ್ರಸ್ತಾವನೆ ನೀಡಿದ್ದೇ ರಾಜ್ಯ ಸರ್ಕಾರ. ಕೇಂದ್ರದಿಂದ ದರ ಏರಿಕೆಗೆ ಸೂಚನೆ ನೀಡಿಲ್ಲ. ಸುಮ್ಮನೇ ತಪ್ಪು ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.

Tags:
error: Content is protected !!