ಬೆಂಗಳೂರು : ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್ ನಾಗ್ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರಿಡಬೇಕು ಎಂದು ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದರು.
ಈ ತಮ್ಮ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಅವರು, ಕನ್ನಡ ಚಿತ್ರರಂಗದ ಮೇರು ನಟ ಶ್ರೀ ಶಂಕರ್ ನಾಗ್ ಹಾಗು ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಶ್ರೀಮತಿ ಅಪರ್ಣ ಅವರ ಕೊಡುಗೆ ಕರ್ನಾಟಕಕ್ಕೆ ಹಾಗು ಕನ್ನಡಕ್ಕೆ ಅಪಾರವಾದುದು. ಶ್ರೀ ಶಂಕರ್ ನಾಗ್ ಹಾಗು ಶ್ರೀಮತಿ ಅಪರ್ಣ ಅವರ ಹೆಸರುಗಳನ್ನು ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಸರ್ಕಾರ ನಾಮಕರಣ ಮಾಡಲಿ. ಅವರ ಹೆಸರುಗಳನ್ನ ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಸರ್ಕಾರ ನಾಮಕರಣ ಮಾಡಲಿ ಎಂದು ಬರೆದುಕೊಂಡಿದ್ದಾರೆ.