ರಾಜ್ಯ

ಬಿಜೆಪಿ ವಕ್ತಾರ ಎಂ.ಜಿ.ಮಹೇಶ್‌ 6 ವರ್ಷ ಪಕ್ಷದಿಂದ ಉಚ್ಛಾಟನೆ

ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಘಟಕದ ವಕ್ತಾರ ಹಾಗೂ ಮೈಸೂರಿನ ಎಂ.ಜಿ. ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ.

ಜೂನ್ 19, 2026 ರಂದು ಸಂಜೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಎಂ.ಜಿ. ಮಹೇಶ್ ಅವರು ಹಿರಿಯ ನಾಯಕರ ವಿರುದ್ಧ ಕೀಳುಮಟ್ಟದ ಆರೋಪಗಳನ್ನು ಮಾಡುವ ಮೂಲಕ ಪಕ್ಷದ ಶಿಸ್ತು ಉಲ್ಲಂಘಿಸಿದ್ದರು.

ಈ ವರ್ತನೆಗೆ ಸಂಬಂಧಿಸಿದಂತೆ ರಾಜ್ಯ ಶಿಸ್ತು ಸಮಿತಿಯು ಅವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿ ಉತ್ತರ ಕೇಳಿತ್ತು. ನೋಟಿಸ್‌ಗೆ ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ತೃಪ್ತಿಕರವಾಗಿಲ್ಲದ ಕಾರಣ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಎಂ.ಜಿ. ಮಹೇಶ್ ಅವರು ನೀಡಿದ ಸ್ಪಷ್ಟೀಕರಣವು ತೃಪ್ತಿಕರವಾಗಿಲ್ಲದ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ, ಮುಂದಿನ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ರಾಜ್ಯ ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜು ಪಾಟೀಲ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಪಕ್ಷದ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago