Mysore
20
broken clouds

Social Media

ಗುರುವಾರ, 13 ನವೆಂಬರ್ 2025
Light
Dark

ಮೈಕ್ರೋ ಫೈನಾನ್ಸ್‌ ಕಿರುಕುಳ: ಎಂಎಲ್‌ಸಿ ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್‌ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆಯನ್ನು ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನು ನಾವು ಬಳಕೆ ಮಾಡಿಕೊಳ್ಳೋಣ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಇದಕ್ಕೆ ಈ ಹಿಂದೆಯೂ ಕಾಯ್ದೆ ಇತ್ತು. ಆಗ ಕಿರುಕುಳ ಇರಲಿಲ್ಲ ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್‌ ಫಿಕ್ಸ್‌ ಮಾಡೋದ್ರಲ್ಲಿ ಕಾಣದ ಕೈಗಳು ಇವೆ ಎಂದು ಅನುಮಾನ ವ್ಯಕ್ತಪಡಿಸಿದರು.

 

 

Tags:
error: Content is protected !!