ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳದ ಹಿಂದೆ ಕಾಣದ ಕೈಗಳು ಇರಬಹುದು ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಕಿರುಕುಳ ಕಡಿವಾಣಕ್ಕೆ ರಾಜ್ಯ ಸರ್ಕಾರಕ್ಕಿಂತ ಕೇಂದ್ರ ಸರ್ಕಾರ ನಿಯಮ ತರಬೇಕು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆ ಜನರ ಸಮಸ್ಯೆ ಪರಿಹಾರ ಮಾಡುತ್ತಿದೆ. ಹೀಗೆ ಅನೇಕ ಸಂಸ್ಥೆಗಳು ಒಳ್ಳೆಯ ಕೆಲಸ ಮಾಡುತ್ತಿವೆ. ನಾವು ಮೊದಲು ಕಿರುಕುಳ ಕೊಡುವ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು. ಕಡಿವಾಣ ಹಾಕಲು ರಾಜ್ಯದ ಕಾಯ್ದೆಯಲ್ಲಿ ಅವಕಾಶ ಇದೆ. ಆ ಕಾಯ್ದೆಯನ್ನು ನಾವು ಬಳಸಿಕೊಳ್ಳೋಣ. ರಾಜ್ಯಪಾಲರು ಸುಗ್ರೀವಾಜ್ಞೆಗೆ ಸಹಿ ಹಾಕಿದ್ದಾರೆ. ಅದನ್ನು ನಾವು ಬಳಕೆ ಮಾಡಿಕೊಳ್ಳೋಣ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಇದಕ್ಕೆ ಈ ಹಿಂದೆಯೂ ಕಾಯ್ದೆ ಇತ್ತು. ಆಗ ಕಿರುಕುಳ ಇರಲಿಲ್ಲ ಈಗ ಹಾವಳಿ ಜಾಸ್ತಿ ಆಗಿರುವ ಹಿಂದೆ ಕಾಣದ ಕೈಗಳು ಇರಬಹುದು. ಅಧಿಕಾರಿಗಳ ರೇಟ್ ಫಿಕ್ಸ್ ಮಾಡೋದ್ರಲ್ಲಿ ಕಾಣದ ಕೈಗಳು ಇವೆ ಎಂದು ಅನುಮಾನ ವ್ಯಕ್ತಪಡಿಸಿದರು.
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…
ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆಯ ವರಾಹ ಗೇಟ್‌ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಸಾರ್ವಜನಿಕರು ಆಗಮಿಸುವ…
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ…
ಮೈಸೂರು: ಅಕ್ರಮವಾಗಿ ಶ್ರೀಗಂಧ ಶೇಖರಣೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಮೈಸೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆಯಲ್ಲಿ ಈ ಘಟನೆ…
ಬೆಂಗಳೂರು: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು ಕೂಡ 60 ಇಂಡಿಗೋ ವಿಮಾನಗಳ ಹಾರಾಟ ರದ್ದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿರುವ ಕೆಂಪೇಗೌಡ…