ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವವರ ಹಿತ ಕಾಪಾಡಲು ಸರ್ಕಾರ ಬದ್ಧವಾಗಿದೆ. ಸಾಲಗಾರರಿಗೆ ಕಿರುಕುಳ ನೀಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಬಳಿಕ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ. ಸಾಲಗಾರರ ಹಿತವನ್ನು ಕಾಪಾಡುವ ದೃಷ್ಟಿಯಿಂದ ಆದಷ್ಟು ಬೇಗನೆ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ರಚನೆ ಮಾಡಲು ಚಿಂತಿಸಲಾಗಿದೆ ಎಂದರು.
ಸ್ವಯಂ ಪ್ರೇರಿತ ದೂರು ದಾಖಲು
ಈಗಿರುವ ಕಾನೂನು ಇನ್ನಷ್ಟು ಬಲಪಡಿಸಲು ಕ್ರಮವಹಿಸಲಾಗುವುದು. ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಸ್ವಯಂಪ್ರೇರಿತ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಾಧ್ಯವಾಗುವಂತೆ ಕಾನೂನಿನಲ್ಲಿ ಅವಕಾಶ ಮಾಡಲಾಗುವುದು. ಇದರಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ನೀಡಿ, ನೋಂದಣಿಯಾಗದ ಲೇವಾದೇವಿಗಾರರ ಮೇಲೆ ನಿಯಂತ್ರಣಕ್ಕೆ ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆ ನಡೆಸಿ
ಬೆದರಿಸಿ ಬಲವಂತದ ಸಾಲ ವಸೂಲಾತಿ ಒಪ್ಪಲು ಸಾಧ್ಯವಿಲ್ಲ. ಬಡ ಸಾಲಗಾರರ ಹಿತವನ್ನು ಕಾಪಾಡಲು ಸರ್ಕಾರ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಿದೆ. ಯಾರಾದರೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಂದ ಕಿರುಕುಳ ಎದುರಿಸುತ್ತಿದ್ದರೆ ಸ್ಥಳೀಯವಾಗಿ ಪೊಲೀಸರಿಗೆ ದೂರು ನೀಡಬೇಕು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಳು ಸಭೆ ನಡೆಸಿ ಈ ಕುರಿತ ಜನರಿಗೆ ಸೂಕ್ತ ತಿಳುವಳಿಕೆ, ಹಾಗೂ ಮೈಕ್ರೋ ಫೈನಾನ್ಸ್ ವ್ಯಕ್ತಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಹೇಳಿದರು.
ಸಹಾಯವಾಣಿ ಆರಂಭ
ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಪ್ರತಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಹಾಯವಾಣಿ ಆರಂಭಿಸಲು ಸೂಚನೆ ನೀಡಲಾಗಿದೆ. ಇಲ್ಲಿ ದೂರು ನೀಡಬಹುದು; ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಸೂಚಸಿಲಾಗಿದೆ ಎಂದರು.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…