ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳದಿಂದ ರಾಜ್ಯಾದ್ಯಾಂತ ಹಲವಾರು ಸಾವು-ನೋವುಗಳಗಿವೆ. ಇವರ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕೊನೆಗೂ ನಿರ್ಧಾರ ಮಾಡಿದ್ದು, ಇದೀಗ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಫುಟ ಅನುಮೋದನೆ ನೀಡಿದೆ.
ಇಂದು (ಜ.30) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ಸಿಕ್ಕಿದೆ.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್‌ಕೆ ಪಾಟೀಲ್, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿಗೆ ಕಡಿವಾಣ ಹಾಕಲು ಸಂಪುಟದಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ. ಇಂದು ಸಂಜೆ 4 ಗಂಟೆಗೆ ಹಿರಿಯರ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಅಂತಿಮ ನಿರ್ಧಾರ ಮಾಡುವ ಪರಮಾಧಿಕಾರವನ್ನು ಸಿಎಂಗೆ ಬಿಡಲಾಗಿದೆ ಎಂದು ತಿಳಿಸಿದರು.
ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಹಾಗೂ ಮೈನಸ್ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಹಿರಿಯದ ಸಭೆ ಕರೆಯಲಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು.


