ರಾಜ್ಯ

ಮೈಕ್ರೋ ಫೈನಾನ್ಸ್‌ ಹಾವಳಿ: ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳದಿಂದ ರಾಜ್ಯಾದ್ಯಾಂತ ಹಲವಾರು ಸಾವು-ನೋವುಗಳಗಿವೆ. ಇವರ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಕೊನೆಗೂ ನಿರ್ಧಾರ ಮಾಡಿದ್ದು, ಇದೀಗ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಫುಟ ಅನುಮೋದನೆ ನೀಡಿದೆ.

ಇಂದು (ಜ.30) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿ ತಡೆಗೆ ಸುಗ್ರೀವಾಜ್ಞೆ ಹೊರಡಿಸಲು ಅನುಮೋದನೆ ಸಿಕ್ಕಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಎಚ್‌ಕೆ ಪಾಟೀಲ್‌, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಹಾವಳಿಗೆ ಕಡಿವಾಣ ಹಾಕಲು ಸಂಪುಟದಲ್ಲಿ ಸುಗ್ರೀವಾಜ್ಞೆಗೆ ಅನುಮೋದನೆ ನೀಡಲಾಗಿದೆ. ಇಂದು ಸಂಜೆ 4 ಗಂಟೆಗೆ ಹಿರಿಯರ ಸಭೆಯಲ್ಲಿ ಅಂತಿಮ ತೀರ್ಮಾನ ಮಾಡಲಾಗುತ್ತದೆ. ಅಂತಿಮ ನಿರ್ಧಾರ ಮಾಡುವ ಪರಮಾಧಿಕಾರವನ್ನು ಸಿಎಂಗೆ ಬಿಡಲಾಗಿದೆ ಎಂದು ತಿಳಿಸಿದರು.

ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್‌ ಹಾಗೂ ಮೈನಸ್‌ ಆಗಲಿವೆ. ಹೀಗಾಗಿ ಕಾನೂನಾತ್ಮಕ ತೀರ್ಮಾನಕ್ಕೆ ಹಿರಿಯದ ಸಭೆ ಕರೆಯಲಾಗಿದೆ ಎಂದು ಎಚ್‌.ಕೆ.ಪಾಟೀಲ್‌ ಹೇಳಿದರು.

 

ಆಂದೋಲನ ಡೆಸ್ಕ್

Recent Posts

ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ

ಜೇನುಕುರುಬರ ಡೋಬಿ, ಮಾವುತ ಮತ್ತು ಗಾಯಕ ದುಬಾರೆ ಆನೆ ಶಿಬಿರ ಬಡತನವಿದ್ದರೂ ಎಲ್ಲರೂ ಒಟ್ಟಾಗಿ ಹಬ್ಬ ಆಚರಿಸುವ ಉಗಾದಿ ಸುಖ…

27 mins ago

ಮಂಡ್ಯ | ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆ

ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…

13 hours ago

ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ದಾಳಿ : ಇರಾನಿನ ಕ್ಷಿಪಣಿ ತಾಣ ನಾಶ

ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…

15 hours ago

ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ

ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…

16 hours ago

ಮೈಸೂರು ನಗರದಲ್ಲಿ ಮಳೆ ; ತಂಪಾದ ಇಳೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…

17 hours ago

ಯುಗಾದಿ ಸಂಭ್ರಮ : ಮೈಸೂರಲ್ಲಿ ಖರೀದಿ ಜೋರು

ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…

18 hours ago