Mysore
26
clear sky

Social Media

ಗುರುವಾರ, 06 ಫೆಬ್ರವರಿ 2025
Light
Dark

ಮೈಕ್ರೋ ಫೈನಾನ್ಸ್‌ ಕಿರುಕುಳ: 10 ವರ್ಷ ಜೈಲು ಶಿಕ್ಷೆ; ಸಚಿವ ಜಿ.ಪರಮೇಶ್ವರ್‌

ಬೆಂಗಳೂರು: ಮೈಕ್ರೋ ಫೈನಾನ್ಸ್‌ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಹೊರಡಿಸಿದ್ದು, ಕರಡು ಬಿಲ್‌ನಲ್ಲಿ ಶಿಕ್ಷೆಯ ಪ್ರಮಾಣವನ್ನು 10 ವರ್ಷಕ್ಕೆ ಏರಿಕೆ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳಕ್ಕೆ ಸರಣಿ ಆತ್ಮಹತ್ಯೆಗಳು ನಡೆಯುತ್ತಿದ್ದಾವೆ. ಈ ಸಂಬಂಧ ಮೈಕ್ರೋ ಫೈನಾನ್ಸ್‌ ದೌರ್ಜನ್ಯ ತಡೆಗೆ ಕರಡು ಪ್ರತಿ ಸಿದ್ದವಾಗಿದ್ದು, ಅದನ್ನು ರಾಜ್ಯಪಾಲರಿಗೆ ರವಾನಿಸಲಾಗಿದೆ.

ಇಂದು ರಾಜ್ಯಪಾಲರು ಕರಡು ಪ್ರತಿಯನ್ನು ಪರಿಶೀಲಿಸಿ ಅಂಕಿತ ಹಾಕುವ ಸಾಧ್ಯತೆ ಇದೆ ಎಂದು ಹೇಳಿದರು.

ಮೈಕ್ರೋ ಫೈನಾನ್ಸ್‌ ಹಾವಳಿ ತಪ್ಪಿಸಲು ಈ ಹಿಂದೆ ಶಿಕ್ಷೆಯ ಪ್ರಮಾಣವನ್ನು 3 ವರ್ಷ ಮಾಡಿದ್ದೆವು. ಆದರೆ, ಅದನ್ನು ಈಗ ಬದಲಾಯಿಸಿ 10 ವರ್ಷ ಜೈಲು ಶಿಕ್ಷೆ ಮತ್ತು ದಂಡದ ಮೊತ್ತವನ್ನು 5 ಲಕ್ಷ ರೂಪಾಯಿಗೆ ಹೆಚ್ಚಿಸಿದ್ದೇವೆ ಎಂದು ತಿಳಿಸಿದರು.

Tags: