ಚಿತ್ರದುರ್ಗ : ಡಿಸೆಂಬರ್ ಬಳಿಕ ಯಾವುದೇ ಸಂದರ್ಭದಲ್ಲಾದರೂ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಎಂದು ನಾನು ಹೇಳಲ್ಲ. ಡಿಸೆಂಬರ ಬಳಿಕ ಯಾವುದೇ ಸಂದರ್ಭದಲ್ಲಿ ಚುನಾವಣೆ ಬರಬಹುದು. 150 ಶಾಸಕರೊಂದಿಗೆ ಬಿಜೆಪಿ ಸರ್ಕಾರ ರಚಿಸುವ ಭರವಸೆಯಿದೆ. ಕಾಂಗ್ರೆಸ್ ಸರ್ಕಾರ ಒಂದೇ ಒಂದು ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಸಿಎಂ, ಡಿಸಿಎಂ, ಉಸ್ತುವಾರಿ ಸಚಿವರಿಗೆ ಜನ ಶಾಪ ಹಾಕುತ್ತಿದ್ದಾರೆಂದು ಕಿಡಿಕಾರಿದ್ದಾರೆ





