ಅರೇಹಳ್ಳಿ: ಕಾಫಿ ತೋಟವೊಂದರಲ್ಲಿ ಮೆಣಸು ಕುಯ್ಯುವ ವೇಳೆ ಹೃದಯಘಾತವಾಗಿ ಅಸ್ಸಾಂ ಮೂಲದ ವಲಸೆ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಅಸ್ಸಾಂ ಮೂಲದ ಫಾರೂಖ್ (18) ಎಂಬಾತ ಮೃತಪಟ್ಟಿರುವ ವ್ಯಕ್ತಿ.
ತಾಲೂಕಿನ ಬಿಕ್ಕೋಡು ಬಳಿಯ ಇರಕರವಲ್ಲಿ ಗ್ರಾಮದ ಮಕ್ಬೂಲ್ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ ಇಂದು ಸಂಜೆಯ ವೇಳೆಯಲ್ಲಿ ಮೆಣಸು ಕೊಯ್ಲು ಕೆಲಸ ಮುಗಿಯುತ್ತಿದ್ದಂತೆ ಎಲ್ಲಾ ಕಾರ್ಮಿಕರು ಕಣದತ್ತ ವಾಪಸ್ಸಾದರು.
ಫಾರೂಖ್ ಎಂಬಾತ ಬಾರದನ್ನೂ ಗಮನಿಸಿದ ಇನ್ನುಳಿದ ಕಾರ್ಮಿಕರು ಹುಡುಕಾಟ ನಡೆಸಿದ್ದಾರೆ. ನಂತರ, ಮರದ ಬಳಿ ಅಂಗಾತ ಬಿದ್ದಿರುವುದು ಕಂಡು ತಕ್ಷಣ ಹತ್ತಿರದ ಅರೇಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ, ಆ ವೇಳೆಗಾಗಲೆ ಮೃತಪಟ್ಟಿರುವುದನ್ನು ವೈದ್ಯಾಧಿಕಾರಿ ದೃಢಪಡಿಸಿದ್ದಾರೆ.
ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ಅರೇಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಯ ನಂತರವಷ್ಟೇ ಸಾವಿನ ನಿಜಾಂಶ ಹೊರಬೀಳಬೇಕಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…