ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಘಟನೆಯಲ್ಲಿ ಒಟ್ಟು ಐವರು ಯೋಧರು ಹುತಾತ್ಮರಾಗಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತರಕಣ್ಣವರ(45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್(33) ಮಹಾಲಿಂಗಪುರದ ಮಹೇಶ್ ಮರಿಗೊಂಡ (25) ಮೃತ ಯೋಧರು.
ಮೃತರ ಸುದ್ದಿ ತಿಳಿದ ಕುಟುಂಬಸ್ಥರು, ಸಂಬಂಧಿಕ ಮನೆಯಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.
ಯೋಧರು ಸೇನಾ ವಾಹನದದಲ್ಲಿ ಸಾಗುತ್ತಿದ್ದರು. ವಾಹನವು ಕಿರಿದಾದ ರಸ್ತೆಯಿಂದ ಜಾರಿ ಅಂದಾಜು 150ಅಡಿ ಆಳದ ಕಮರಿಗೆ ಉರುಳಿತು. ವಾಹನವು ರಸ್ತೆಯಿಂದ ಜಾರಿದ್ದು ಏಕೆ ಎಂದ ಬಗ್ಗೆ ತನಿಖೆ ನಡೆದಿದೆ.
ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…
ಗುವಾಹಟಿ: ರೈಲು ಡಿಕ್ಕಿ ಹೊಡೆದ ಪರಿಣಾಮ ಏಳು ಆನೆಗಳು ಸ್ಥಳದಲ್ಲೇ ಮೃತಪಟ್ಟಿದ್ದು, ಒಂದು ಆನೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಅಸ್ಸಾಂನ…
ಮಂಗಳೂರು: ಧರ್ಮಸ್ಥಳ ಷಡ್ಯಂತ್ರ ಪ್ರಕರಣದ ಪ್ರಮುಖ ಆರೋಪಿ ಮಾಸ್ಕ್ ಮ್ಯಾನ್ ಚಿನ್ನಯ್ಯ ಇದೀಗ ಬುರುಡೆ ಗ್ಯಾಂಗ್ ವಿರುದ್ಧವೇ ತಿರುಗಿ ಬಿದ್ದಿದ್ದಾನೆ.…
ಬೆಂಗಳೂರು: ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಲಾದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಗೆ ಅಂಕಿತ ಹಾಕಬಾರದು…
ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿಧೇಯಕವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಡಿ.೧೮ರಂದು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ…
ರಾಜ್ಯದಲ್ಲಿ ‘ಸಾಮಾಜಿಕ ಬಹಿಷ್ಕಾರ ನಿಷೇಧ ’ ಕಾನೂನನ್ನು ಜಾರಿಗೊಳಿಸಲು ಮುಂದಾಗಿರುವ ರಾಜ್ಯಸರ್ಕಾರದ ಕ್ರಮ ಶ್ಲಾಘನೀಯ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಾರ್ವಭೌಮತೆ,…