Mysore
33
scattered clouds

Social Media

ಭಾನುವಾರ, 20 ಏಪ್ರಿಲ 2025
Light
Dark

ರಾಜ್ಯದಲ್ಲಿ ಹಾಲಿನ ದರ ಏರಿಕೆ: ಕೆಎಂಎಫ್‌ ಪರ ಸಿಎಂ ಸಿದ್ದರಾಮಯ್ಯ ಸಮರ್ಥನೆ

ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್‌ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ನಮ್ಮ ಸರ್ಕಾರ ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ ಎಂದು ತಿಳಿಸಿದ್ದಾರೆ.

ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ ಕೈಸೇರುತ್ತಿರುವುದು ಪ್ರೋತ್ಸಾಹಕರವಾಗಿದೆ ಎಂದು ಹೇಳಿದ್ದಾರೆ.

ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಹಾಲಿನ ದರ?

Tags: