ಬೆಂಗಳೂರು: ಹೊರ ರಾಜ್ಯಗಳ ಹಾಲಿನ ಮಾರಾಟ ದರಗಳಿಗೆ ಹೋಲಿಸಿದರೆ ನಂದಿನಿ ಹಾಲಿನ ಮಾರಾಟ ದರ ಈಗಲೂ ಅತ್ಯಂತ ಕಡಿಮೆ ದರದಲ್ಲಿ ಶುದ್ಧ ಹಾಗೂ ಗುಣಮಟ್ಟದ ಹಾಲನ್ನು ನಮ್ಮ ರಾಜ್ಯದ ಕೆಎಂಎಫ್ ಪೂರೈಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸಮರ್ಥನೆ ಮಾಡಿಕೊಂಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಪ್ರಸ್ತುತ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿರುವ ಕಾರಣದಿಂದ ಸಂಕಷ್ಟಕ್ಕೆ ಒಳಗಾಗಿರುವ ರಾಜ್ಯದ ಹೈನುಗಾರರ ನೆರವಿಗೆ ನಮ್ಮ ಸರ್ಕಾರ ಧಾವಿಸಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ಬೆಲೆ ಏರಿಕೆ ಮಾಡಿದ್ದೇವೆ. ಕೆಎಂಎಫ್’ನ ನಂದಿನಿ ಹಾಲಿನ ಬೆಲೆಗೆ ಹೋಲಿಸಿದರೆ ಹೊರರಾಜ್ಯಗಳ ಹಾಲು ಒಕ್ಕೂಟಗಳು ಮಾರಾಟ ಮಾಡುವ ದರ ಹೆಚ್ಚಿನದ್ದಾಗಿದೆ ಎಂದು ತಿಳಿಸಿದ್ದಾರೆ.
ಶುದ್ಧ ಹಾಗೂ ಗುಣಮಟ್ಟದ ದೃಷ್ಟಿಯಲ್ಲಿ ನಂದಿನಿ ಹಾಲು ಹಾಗೂ ಉತ್ಪನ್ನಗಳು ದೇಶದಲ್ಲೇ ಅತಿಹೆಚ್ಚು ಶ್ಲಾಘನೆಗೆ ಒಳಪಟ್ಟಿವೆ. ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶದ ನಾನಾ ಭಾಗಗಳಿಂದ ನಂದಿನಿ ಹಾಲು ಹಾಗೂ ಇತರೆ ಉತ್ಪನ್ನಗಳಿಗೆ ಬೇಡಿಕೆ ವ್ಯಕ್ತವಾಗುತ್ತಿದೆ. ಇದರಿಂದ ರಾಜ್ಯದ ಹೈನುಗಾರರಿಗೆ ಉತ್ತೇಜನ ಸಿಗುತ್ತಿದ್ದು, ಇದೀಗ ಸಣ್ಣ ಪ್ರಮಾಣದಲ್ಲಿ ಏರಿಕೆಯಾದ ಹಾಲಿನ ದರವು ನೇರವಾಗಿ ಹೈನುಗಾರರ ಕೈಸೇರುತ್ತಿರುವುದು ಪ್ರೋತ್ಸಾಹಕರವಾಗಿದೆ ಎಂದು ಹೇಳಿದ್ದಾರೆ.
ಯಾವ್ಯಾವ ರಾಜ್ಯಗಳಲ್ಲಿ ಎಷ್ಟು ಹಾಲಿನ ದರ?
ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…