ಹಾಸನ: ಹಾಲಿನ ದರ 4 ರೂ. ಏರಿಕೆಯ ಸರ್ಕಾರದ ನಿರ್ಧಾರದಿಂದ ಹಾಮೂಲ್ ಹಾಗೂ ಮಾರಾಟವಾಗದ ಹಾಲಿಗೂ ನೀಡುವ ಬಟವಾಡೆಯಿಂದ ಮಾಸಿಕ 9 ಕೋಟಿ ರೂಪಾಯಿ ನಷ್ಟವಾಗುವ ಆತಂಕ ಎದುರಾಗಿದೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್‌ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ತಿಳಿಸಿದರು.
ಒಟ್ಟಾರೆ 3.18 ಲಕ್ಷ ಲೀಟರ್ ಉತ್ಪನ್ನಗಳು ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಮಾರಾಟವಾಗುತ್ತಿವೆ. ಆದರೆ, ಉಳಿದ 9.40 ಲಕ್ಷ ಲೀಟರ್ ಹಾಲು ಮಾರಾಟವಾಗದೇ ಉಳಿಯುತ್ತಿದೆ. ಇನ್ನೊಂದು ತಿಂಗಳಲ್ಲಿ 2.5 ಲಕ್ಷ ಲೀಟರ್ ಹಾಲು ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೇವಣ್ಣ ಹೇಳಿದ್ದಾರೆ.
4 ರೂ. ದರ ಹೆಚ್ಚಳ ಮಾಡಿ ಹಾಲು ಉತ್ಪಾದಕರಿಗೆ ನೀಡುವುದರಿಂದ ಹಾಸನ ಹಾಲು ಒಕ್ಕೂಟಕ್ಕೆ ದಿನಕ್ಕೆ 36 ಲಕ್ಷ ರೂಪಾಯಿ ಮತ್ತು ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ. ಇದು ಒಕ್ಕೂಟದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತವಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.
“ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ” ಎಂದರು.
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…
ಬೆಂಗಳೂರು: ನಾನು ನನ್ನ ವಾಚ್ ವಿಚಾರವಾಗಿ ಲೋಕಾಯುಕ್ತ ಸೇರಿದಂತೆ ಎಲ್ಲೆಲ್ಲಿ ಮಾಹಿತಿ ನೀಡಬೇಕೋ, ಎಲ್ಲಾ ನೀಡಿದ್ದೇನೆ. ನಾನು ಈ ವಿಚಾರದಲ್ಲಿ…
ಮೈಸೂರು: ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.…
ಮಂಗಳೂರು: ಧರ್ಮಸ್ಥಳದಲ್ಲಿ ಶವಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನಾಗಿ ಬಂದ ಬಳಿಕ ಆರೋಪಿಯಾಗಿ ಜೈಲಿನಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಜಾಮೀನು ಸಿಕ್ಕಿ…
ಟಿ.ನರಸೀಪುರ: ಜಗದ್ಗುರು ಶ್ರೀ ಶಿವರಾತ್ರಿ ಡಾ.ರಾಜೇಂದ್ರ ಶ್ರೀಗಳ 110ನೇ ಜಯಂತೋತ್ಸವ ಹಾಗೂ ಶ್ರೀ ನಂಜುಂಡಸ್ವಾಮಗಳ 16ನೇ ಸಂಸ್ಮರಣೋತ್ಸವ ಕಾರ್ಯಕ್ರಮ ಹೊಸಮಠದ…
ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೊ ದರವನ್ನು ಶೇ. 5.5% ರಿಂದ 5.25ಕ್ಕೆ ಅಂದರೆ 25 ಬೇಸಿಸ್ ಪಾಯಿಂಟ್‍ಗಳಷ್ಟು…