ಬೆಂಗಳೂರು: ರೈತರಿಗೆ ನೆರವಾಗಲೆಂದೇ ಹಾಲಿನ ದರ ಏರಿಕೆ ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಬೆಲೆ ಏರಿಕೆ ಪ್ರಾರಂಭ ಮಾಡಿದವರೇ ಬಿಜೆಪಿಯವರು. ರೈತರಿಗೆ ನೆರವಾಗಲು ನಾವು ಹಾಲಿನ ದರ ಏರಿಕೆ ಮಾಡಿದ್ದೇವೆ. ಬಿಜೆಪಿಯವರು ಬೆಲೆ ಏರಿಕೆ ಮಾಡಿದ್ದ ಕಾರಣಕ್ಕೆ ನಾವು ಗ್ಯಾರಂಟಿ ಯೋಜನೆ ನೀಡಿದ್ದೇವೆ. ಬೆಲೆ ಏರಿಕೆ ನಂತರವೂ ಬೇರೆ ರಾಜ್ಯಗಳಿಗಿಂತ ನಮ್ಮಲ್ಲಿ ಹಾಲಿನ ದರ ಕಡಿಮೆಯಿದೆ ಎಂದು ತಿಳಿಸಿದರು.
ಇನ್ನು ಭದ್ರಾ ಮೇಲ್ದಂಡೆ ಅನುದಾನ ವಿಚಾರ ಕೇಂದ್ರ ಸಚಿವ ಸಂಪುಟದ ಮುಂದಿದೆ. ಯೋಜನೆಗೆ 5300 ಕೋಟಿ ರೂ ಅನುದಾನ ಬಿಡುಗಡೆ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಇಡಲಾಗಿದೆ. ಈ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರು ತಿಳಿಸಿದ್ದಾರೆ. ನಮ್ಮ ಎಲ್ಲಾ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ ಎಂದರು.





