ಬೆಂಗಳೂರು: ಹಾಲಿನ ದರ 2 ರೂ ಹೆಚ್ಚಳ ಮಾಡಿರುವುದನ್ನು ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಸಮರ್ಥಿಸಿಕೊಂಡಿದ್ದು, ಅಲ್ಲದೇ ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು ಎಂದು ಹೇಳಿಕೆ ನೀಡಿದ್ದಾರೆ.
ಹಾಲಿನ ದರ ಏರಿಕೆಗೆ ಬಿಜೆಪಿ ಮತ್ತು ರಾಜ್ಯದ ಜನತೆ ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಬಿಜೆಪಿಯವರು ರೈತ ವಿರೋಧಿಗಳು. ಜಾಸ್ತಿಯಾಗಿರುವ 2ರೂ ರೈತರಿಗೆ ತಲುಪುತ್ತೆ. ರೈತರಿಗೆ ಹಣ ತಲುಪೋಲ್ಲ ಅನ್ನೋದನ್ನು ಯಾರು ಹೇಳಿದ್ರು ಎಂದು ಪ್ರಶ್ನೆ ಮಾಡಿದ ಅವರು, ಕೆಎಂಎಫ್ ಉಳಿದರೆ ರೈತರು ಉಳಿದಂತೆ ಎಂದಿದ್ದಾರೆ.
ರೈತರು ಸಾಲದಿಂದ ಎಲ್ಲಾ ಹಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಬಿಜೆಪಿಯವರ ರೈತ ವಿರೋಧಿ ಧೋರಣೆ ಎದ್ದು ಕಾಣುತ್ತಿದೆ. ಬೇರೆ ರಾಜ್ಯದಲ್ಲಿ ಹಾಲಿನ ದರ ಎಷ್ಟಿದೆ ನೋಡಲಿ. ಆ ಮೇಲೆ ದರ ಏರಿಕೆ ಬಗ್ಗೆ ಮಾತನಾಡಲಿ ಎಂದು ಬಿಜೆಪಿಗೆ ಟಾಂಗ್ ಕೊಟ್ಟಿದ್ದಾರೆ.
ನನ್ನ ಪ್ರಕಾರ ಹಾಲಿನ ದರ ಇನ್ನಷ್ಟು ಹೆಚ್ಚಬೇಕಿತ್ತು. ಕೆಎಂಎಫ್ ಎಂದರೆ ರೈತರ ಒಕ್ಕೂಟ. ನನ್ನ ಪ್ರಕಾರ ಇನ್ನೂ ಹಾಲಿನ ದರ ಜಾಸ್ತಿ ಮಾಡಬೇಕು. ಯಾರೂ ಏನು ಬೇಕಾದರೂ ಟೀಕೆ ಮಾಡಿಕೊಳ್ಳಲಿ ಎಂದು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…