ರಾಜ್ಯ

ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ: ಸಚಿವ ಕೆ.ವೆಂಕಟೇಶ್‌ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಜೂನ್‍ನಿಂದ ಪ್ರತಿದಿನ ಒಂದು ಕೋಟಿ ಲೀಟರ್‌ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದ್ದು, ಸದ್ಯಕ್ಕೆ ಹಾಲಿನ ದರ ಏರಿಕೆ ಮಾಡುವುದಿಲ್ಲ ಎಂದು ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ರಿಲ್‍ನಲ್ಲಿ ಲೀಟರ್‍ಗೆ 4ರೂ. ಹಾಲಿನ ದರ ಹೆಚ್ಚಳ ಮಾಡಿದ್ದು, ಅದನ್ನು ಹಾಲಿನ ಉತ್ಪಾದಕರಿಗೆ ನೀಡಲಾಗುತ್ತಿದೆ. 65 ಲಕ್ಷ ಲೀಟರ್ ಹಾಲು ರಾಜ್ಯ, ಹೊರ ರಾಜ್ಯ ಮತ್ತು ವಿದೇಶಗಳಲ್ಲಿ ಮಾರಾಟವಾಗುತ್ತದೆ. ಉಳಿದ ಹಾಲನ್ನು ಹಾಲಿನ ಉತ್ಪನ್ನಗಳ ತಯಾರಿಕೆಗೆ ಬಳಸಲಾಗುತ್ತಿದೆ ಎಂದು ಹೇಳಿದರು.

ಇದನ್ನು ಓದಿ: ಕೆಎಂಎಫ್‌ನಿಂದ ಮತ್ತೊಂದು ಮೈಲಿಗಲ್ಲು:‌ ಏನದು ಗೊತ್ತಾ?

ಲೀಟರ್ ಹಾಲಿನ ದರವನ್ನು 10 ರೂ. ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಗ್ರಾಹಕರ ಹಿತ ಗಮನದಲ್ಲಿಟ್ಟುಕೊಂಡು 4 ರೂ. ಹೆಚ್ಚಳ ಮಾಡಲಾಗಿದೆ. ಜೂನ್ ಅಂತ್ಯದವರೆಗೆ ಪ್ರತಿ ಲೀಟರ್‍ಗೆ 5ರೂ. ನೀಡುವ ಹಾಲಿನ ಪ್ರೋತ್ಸಾಹಧನವನ್ನು ರೈತರಿಗೆ ನೀಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ನೀಡಬೇಕಿದ್ದು, ಸರ್ಕಾರದಿಂದ ಬಿಡುಗಡೆಯಾದ ತಕ್ಷಣ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ರೈತರಿಗೆ ಪಶು ಆಹಾರವನ್ನು ರಿಯಾಯಿತಿ ದರದಲ್ಲಿ ನೀಡಲು ಒಕ್ಕೂಟಗಳಿಗೆ ನಿರ್ದೇಶಿಸಲಾಗಿದೆ. ಹಾಲಿನ ದರ ಹೆಚ್ಚಳವಾದ ನಂತರ ನಿತ್ಯ 20 ಲಕ್ಷ ಲೀಟರ್‍ಗೂ ಹೆಚ್ಚು ಹಾಲು ಉತ್ಪಾದನೆಯಾಗುತ್ತಿದೆ. ರೈತರು ಹಾಗೂ ಗ್ರಾಹಕರ ಸ್ನೇಹಿಯಾಗಿ ಕೆಎಂಎಫ್ ಕಾರ್ಯನಿರ್ವಹಿಸುತ್ತಿದ್ದು, ಹಾಲಿನ ಉತ್ಪನ್ನಗಳ ಮಾರಾಟದಲ್ಲಿ ಶೇ.3ರಿಂದ ಶೇ.4ರಷ್ಟು ಲಾಭಾಂಶ ಇಟ್ಟುಕೊಂಡಿದೆ. ನಂದಿನಿ ಉತ್ಪನ್ನಗಳ ಮಾರಾಟಗಾರರ ಮಾರ್ಜಿನ್‍ ಅನ್ನು ಪರಿಷ್ಕರಿಸುವ ಬಗ್ಗೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

2 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

3 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago