ರಾಜ್ಯ

ಮಿನರಲ್‌ ವಾಟರ್‌ ಬಾಟಲ್‌ ಆರೋಗ್ಯಕ್ಕೆ ಹಾನಿಕರ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು

ಬೆಂಗಳೂರು: ಮಿನರಲ್‌ ವಾಟರ್‌ ಬಾಟಲ್‌ಗಳಲ್ಲಿಯೂ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು, ಜನತೆಯಲ್ಲಿ ಆತಂಕ ಮನೆಮಾಡಿದೆ.

ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮಾಹಿತಿ ನೀಡಿದ್ದು, ಅಸುರಕ್ಷಿತ ಹಾಗೂ ಕಳಪೆ ಗುಣಮಟ್ಟದ ಬಾಟಲ್‌ ಕುಡಿಯುವ ನೀರು ಪೂರೈಸುವ ಕಂಪನಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

296 ಮಾದರಿಗಳ ವಾಟರ್‌ ಬಾಟಲ್‌ಗಳ ತಪಾಸಣೆ ನಡೆಸಲಾಗಿದ್ದು, ಅದರಲ್ಲಿ 72 ಮಾದರಿಗಳು ಸುರಕ್ಷಿತ, 95 ಅಸುರಕ್ಷಿತ, 88 ಕಳಪೆ ಗುಣಮಟ್ಟದ ಬಾಟೆಲ್‌ಗಳು ಎಂದು ಗುರುತಿಸಲಾಗಿದೆ.

ಇದು ತುಂಬಾ ಗಂಭೀರವಾದ ವಿಚಾರವಾಗಿದೆ. ಆದ್ದರಿಂದ ನಾವು ಎಲ್ಲಾ ಬಾಟಲಿಗಳನ್ನು ಪರೀಕ್ಷೆ ಮಾಡಲು ತೀರ್ಮಾನ ಮಾಡಿದ್ದೇವೆ. ಅಸುರಕ್ಷಿತ ನೀರಿನ ಬಾಟಲಿಗಳನ್ನು ಪೂರೈಸುವ ಎಲ್ಲಾ ಕಂಪನಿಗಳ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

11 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

11 hours ago

ಶ್ರೀಕಂಠೇಶ್ವರ ದೇವಾಲಯದಲ್ಲಿ ಅಕ್ರಮ?; ತನಿಖೆ ಆರಂಭಿಸಿದ ಎಸಿ ತಂಡ

ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…

11 hours ago

ಪ್ರಧಾನಿ ಮೋದಿಗೆ ಇಥಿಯೋಪಿಯಾದ ಅತ್ಯುನ್ನತ ಗೌರವ

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…

11 hours ago

ಧರ್ಮಸ್ಥಳ ಪ್ರಕರಣ : ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ

ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…

11 hours ago