Mysore
28
broken clouds

Social Media

ಶನಿವಾರ, 17 ಜನವರಿ 2026
Light
Dark

ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ಕುಸಿತ: ಹೆಚ್ಚಾದ ಚಳಿಯ ತೀವ್ರತೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.

ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿತ್ತು. ಆದರೆ ಕಳೆದೆರಡು ದಿನದಿಂದ ಹಗಲು ವೇಳೆ ಬಿಸಿಲು ಹೆಚ್ಚಾಗಿದ್ದು, ರಾತ್ರಿ ವೇಳೆ ಚಳಿ ಅಧಿಕವಾಗಿದೆ. ಅಲ್ಲದೆ ಸಂಜೆ ಹಾಗೂ ಬೆಳಗಿನ ಜಾವ ಹೆಚ್ಚಿನ ಪ್ರಮಾಣದ ಇಬ್ಬನಿಯು ಬೀಳುತ್ತಿದೆ.

ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಮುಂದುವರೆದಿದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ 15 ಡಿಗ್ರಿ ಸೆಲ್ಸಿಯಸ್‌‍ಗಿಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ.

ಅದರಲ್ಲೂ ವಿಶೇಷವಾಗಿ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿತ ಕಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಿಕ್ಕಬಳ್ಳಾಪುರದಲ್ಲಿ 8.8 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರು ಗ್ರಾಮಾಂತರ, ಕೋಲಾರ 9.6 ಡಿ.ಸೆ, ಚಿಕ್ಕಮಗಳೂರು 9.7 ಡಿ.ಸೆ, ತುಮಕೂರು 10.2 ಡಿ.ಸೆ, ಬೆಂಗಳೂರು ನಗರ , ಬೀದರ್‌ 10.7 ಡಿ.ಸೆ, ಮೈಸೂರು 10.9 ಡಿ.ಸೆ, ಬೆಂಗಳೂರು ದಕ್ಷಿಣ, ಹಾಸನ 11.1 ಡಿ.ಸೆ. ಶಿವಮೊಗ್ಗ 11.2 ಡಿ.ಸೆ, ಚಾಮರಾಜನಗರ 11.4 ಡಿ.ಸೆ., ಮಂಡ್ಯ 11.7 ಡಿ.ಸೆ.ಯಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ದಾವಣಗೆರೆ, ವಿಜಯನಗರ, ಗದಗ, ಹಾವೇರಿ, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಲ್ಲಿ 12ರಿಂದ 13 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದ್ದರೆ, ರಾಯಚೂರು, ಉತ್ತರಕನ್ನಡ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ 14ರಿಂದ 15 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.

ಡಿಸೆಂಬರ್‌ ತಿಂಗಳಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ವಾಡಿಕೆಗಿಂತ ಕಡಿಮೆಯಾಗಿ ತೀವ್ರ ಸ್ವರೂಪದ ಚಳಿ ಉಂಟಾಗಿತ್ತು. ಈಗ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚಾಗ ತೊಡಗಿದೆ. ಹೆಚ್ಚು ಕಡಿಮೆ ಇನ್ನು ಒಂದು ವಾರ ಕಾಲ ಇದೇ ಪರಿಸ್ಥಿತಿ ಮುಂದುವರೆಯುವ ಮುನ್ಸೂಚನೆಗಳಿವೆ.

 

Tags:
error: Content is protected !!