ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕನಿಷ್ಠ ತಾಪಮಾನ ತೀವ್ರವಾಗಿ ಕುಸಿತ ಕಂಡಿದ್ದು, ಚಳಿಯ ತೀವ್ರತೆ ಹೆಚ್ಚಾಗಿದೆ.
ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದ್ದ ಪರಿಣಾಮ ಚಳಿ ಹೆಚ್ಚಾಗಿದ್ದರೂ ಕನಿಷ್ಠ ತಾಪಮಾನದಲ್ಲಿ ಹೆಚ್ಚಳವಾಗಿತ್ತು. ಆದರೆ ಕಳೆದೆರಡು ದಿನದಿಂದ ಹಗಲು ವೇಳೆ ಬಿಸಿಲು ಹೆಚ್ಚಾಗಿದ್ದು, ರಾತ್ರಿ ವೇಳೆ ಚಳಿ ಅಧಿಕವಾಗಿದೆ. ಅಲ್ಲದೆ ಸಂಜೆ ಹಾಗೂ ಬೆಳಗಿನ ಜಾವ ಹೆಚ್ಚಿನ ಪ್ರಮಾಣದ ಇಬ್ಬನಿಯು ಬೀಳುತ್ತಿದೆ.
ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಮುಸುಕಿದ ವಾತಾವರಣ ಮುಂದುವರೆದಿದೆ. ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದೆಲ್ಲ ಜಿಲ್ಲೆಗಳಲ್ಲಿ 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ಕನಿಷ್ಠ ತಾಪಮಾನ ದಾಖಲಾಗಿದೆ.
ಅದರಲ್ಲೂ ವಿಶೇಷವಾಗಿ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಗಣನೀಯವಾಗಿ ಕುಸಿತ ಕಂಡಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ ಚಿಕ್ಕಬಳ್ಳಾಪುರದಲ್ಲಿ 8.8 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ, ಕೋಲಾರ 9.6 ಡಿ.ಸೆ, ಚಿಕ್ಕಮಗಳೂರು 9.7 ಡಿ.ಸೆ, ತುಮಕೂರು 10.2 ಡಿ.ಸೆ, ಬೆಂಗಳೂರು ನಗರ , ಬೀದರ್ 10.7 ಡಿ.ಸೆ, ಮೈಸೂರು 10.9 ಡಿ.ಸೆ, ಬೆಂಗಳೂರು ದಕ್ಷಿಣ, ಹಾಸನ 11.1 ಡಿ.ಸೆ. ಶಿವಮೊಗ್ಗ 11.2 ಡಿ.ಸೆ, ಚಾಮರಾಜನಗರ 11.4 ಡಿ.ಸೆ., ಮಂಡ್ಯ 11.7 ಡಿ.ಸೆ.ಯಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.
ದಾವಣಗೆರೆ, ವಿಜಯನಗರ, ಗದಗ, ಹಾವೇರಿ, ಕಲಬುರಗಿ, ಚಿತ್ರದುರ್ಗ ಜಿಲ್ಲೆಗಳಲ್ಲಿ 12ರಿಂದ 13 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದ್ದರೆ, ರಾಯಚೂರು, ಉತ್ತರಕನ್ನಡ, ಬಳ್ಳಾರಿ, ಯಾದಗಿರಿ ಜಿಲ್ಲೆಗಳಲ್ಲಿ 14ರಿಂದ 15 ಡಿ.ಸೆ.ನಷ್ಟು ಕನಿಷ್ಠ ತಾಪಮಾನ ದಾಖಲಾಗಿದೆ.
ಡಿಸೆಂಬರ್ ತಿಂಗಳಿನಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನ ವಾಡಿಕೆಗಿಂತ ಕಡಿಮೆಯಾಗಿ ತೀವ್ರ ಸ್ವರೂಪದ ಚಳಿ ಉಂಟಾಗಿತ್ತು. ಈಗ ದಕ್ಷಿಣ ಕರ್ನಾಟಕ ಜಿಲ್ಲೆಗಳಲ್ಲಿ ಸರಾಸರಿಗಿಂತ ಕನಿಷ್ಠ ತಾಪಮಾನದಲ್ಲಿ ಇಳಿಕೆಯಾಗುತ್ತಿದ್ದು, ಚಳಿಯ ಪ್ರಮಾಣ ಹೆಚ್ಚಾಗ ತೊಡಗಿದೆ. ಹೆಚ್ಚು ಕಡಿಮೆ ಇನ್ನು ಒಂದು ವಾರ ಕಾಲ ಇದೇ ಪರಿಸ್ಥಿತಿ ಮುಂದುವರೆಯುವ ಮುನ್ಸೂಚನೆಗಳಿವೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…