ಬೆಂಗಳೂರು: ಶಾಸಕ ಮುನಿರತ್ನ ಅವರ ಧ್ವನಿ ಮಾದರಿಯನ್ನು ಸಂಗ್ರಹಿಸಿದ ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮುನಿರತ್ನ ಧ್ವನಿ ಮಾದರಿ ಸಂಗ್ರಹಿಸಿ ಎಫ್‌ಎಸ್‌ಎಲ್‌ಗೆ ಕಳಿಸಿದ್ದೇವೆ. ಅವರ ಧ್ವನಿ ಮ್ಯಾಚ್ ಆದರೆ ಕ್ರಮ ತಗೋತೀವಿ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಮುನಿರತ್ನ ಅವರನ್ನು ಏಕಾಏಕಿ ಬಂಧನ ಮಾಡಿಲ್ಲ. ದೂರು ದಾಖಲಾದ ಮೇಲೆಯೇ ಬಂಧಿಸಿರೋದು ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.