ರಾಜ್ಯ

ಕೆಪಿಟಿಸಿಎಲ್‌ ನೌಕರರ ಬೇಡಿಕೆಗಳಿಗೆ ಸ್ಪಂದಿಸಲಾಗುವುದು: ಸಚಿವರ ಭರವಸೆ

ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಿದ ನಿಗಮದ ನೌಕರರ ಸಂಘದ ವಜ್ರಮಹೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, “ಕೆಪಿಟಿಸಿಎಲ್ ನೌಕರರ ಸಂಘದ ಉತ್ಸಾಹ ಹಾಗೂ ಸ್ಪೂರ್ತಿ ನೋಡಿದರೆ ನಾವು ಮತ್ತಷ್ಟು ಜನಪರ ಯೋಜನೆಗಳನ್ನು ರೂಪಿಸಿದರೂ ಅದನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಾರೆ ಎಂಬ ವಿಶ್ವಾಸ ಬರುತ್ತದೆ,” ಎಂದರು.

“ರಾಜ್ಯ ಸರ್ಕಾರ, ಇಂಧನ ಇಲಾಖೆ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವ ನೌಕರರ ಪರವಾಗಿದೆ. ನೌಕರರ ಬೇಡಿಕೆಗಳನ್ನು ಆಡಳಿತ ಮಂಡಳಿ ಸಭೆಯ ಮುಂದೆ ಇಟ್ಟು ಸೂಕ್ತ ಅನುಕೂಲ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು”.

“ನಮ್ಮ ಸರ್ಕಾರದ ಪ್ರಮುಖ ಗ್ಯಾರಂಟಿ ಘೋಷಣೆ ಗೃಹಜ್ಯೋತಿ. ಇಂದು 1.65 ಕೋಟಿ ಮನೆಗಳಿಗೆ ತಲುಪಿದೆ. ಇವರೆಲ್ಲರಿಗೂ ಜೀರೋ ಬಿಲ್ ವಿತರಿಸುತ್ತಿದ್ದೇವೆ. ಅದೇ ರೀತಿ ಕುಸುಮ್- ಸಿ ಯೋಜನೆಗೆ ರಾಜ್ಯ ಸರ್ಕಾರ ಶೇಕಡಾ 50 ರಷ್ಟು ಸಬ್ಸಿಡಿ ನೀಡುತ್ತಿದೆ, ಕೇಂದ್ರ ಶೇಕಡಾ 30 ರಷ್ಟು ಸಬ್ಸಿಡಿ ನೀಡುತ್ತಿದೆ. ಇದು ರೈತರಿಗೆ ಬಲ‌ತಂದಿದೆ. ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ ವಿದ್ಯುತ್ ಒದಗಿಸುವ ಈ ಯೋಜನೆಗೆ ಚಾಲನೆ ನೀಡಿದ್ದೇವೆ. ರೈತರಿಗೆ ಸಮರ್ಪಕ ವಿದ್ಯುತ್ ನೀಡಲು ಕೆಪಿಟಿಸಿಎಲ್ ವತಿಯಿಂದ ಹೆಚ್ಚುವರಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸುತ್ತಿದ್ದೇವೆ, ಇದು ರೈತರಿಗೆ ಶಕ್ತಿ ನೀಡಿದೆ ಎಂದು ಹೇಳಲು ಹೆಮ್ಮೆಪಡುತ್ತೇನೆ,” ಎಂದು ಹೇಳಿದರು.

“ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಹೇಳಿದಂತೆ ಜೈ ಜವಾನ್ ಜೈ ಕಿಸಾನ್ ಎಂಬುದನ್ನು ಗಮನದಲ್ಲಿಟ್ಟುಕೊಂಡು ನಮ್ಮ ಸರ್ಕಾರ ರೈತರಿಗೆ ಹೆಚ್ಚಿನ ಯೋಜನೆ, ಸೌಲಭ್ಯ ಒದಗಿಸುತ್ತಿದೆ,” ಎಂದು ತಿಳಿಸಿದರು.

“ಕೇಂದ್ರದ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ಮಂತ್ರಿಗಳೇ ನಮ್ಮ ಪವನ ವಿದ್ಯುತ್ ಯೋಜನೆಗಳಿಗೆ ‘ನಂಬರ್ ಒನ್’ ಸಾಧನೆ ಬಗ್ಗೆ ಪುರಸ್ಕಾರ ನೀಡಿದ್ದಾರೆ. ಈ ಹಿಂದೆ ಸೌರ ವಿದ್ಯುತ್ ಕ್ಷೇತ್ರದಲ್ಲಿ ಪಾವಗಡದಲ್ಲಿ ಸ್ಥಾಪಿಸಿದ್ದ ಸೌರ ಘಟಕ ದೇಶದಲ್ಲೇ ನಂಬರ್ ಒನ್ ಇತ್ತು. ಮತ್ತೆ ನಂಬರ್ ಒನ್ ನತ್ತ ಹೆಜ್ಜೆ ಇಡುತ್ತಿದ್ದೇವೆ. ನಾವೆಲ್ಲರೂ ಸೇರಿ ಮತ್ತಷ್ಟು ಶ್ರಮಿಸಿ ಸೌರ ವಿದ್ಯುತ್ ಕ್ಷೇತ್ರದಲ್ಲೂ ಕರ್ನಾಟಕ ಮೊದಲ ಸ್ಥಾನಕ್ಕೆ ಬರುವಂತೆ ಮಾಡಬೇಕಿದೆ,” ಎಂದು ತಿಳಿಸಿದರು.

ವಜ್ರಮಹೋತ್ಸವದ ಸಮಾರಂಭದಲ್ಲಿ 2024-25 ನೇ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕೆಪಿಟಿಸಿಎಲ್ ನೌಕರರ ಸಂಘದ ವಜ್ರಮಹೋತ್ಸವದ ಸವಿ ನೆನಪಿಗಾಗಿ ಹೊರತಂದಿರುವ ವಜ್ರಜ್ಯೋತಿ ಸ್ಮರಣ ಸಂಚಿಕೆ ಹಾಗೂ ನೌಕರರ ದಿನದರ್ಶಿಕೆಯನ್ನು ಬಿಡುಗಡೆಗೊಳಿಸಲಾಯಿತು. ನೌಕರರ ಸಂಘದ ಅಧಿಕೃತ ಜಾಲತಾಣ www.kptceu.com ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು.

ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕ್ರೆಡಲ್ ಅಧ್ಯಕ್ಷ ಟಿ.ಡಿ.ರಾಜೇಗೌಡ, ಹೆಸ್ಕಾಂ ಅಧ್ಯಕ್ಷ ಸಯ್ಯದ್ ಅಜೀಂ ಪೀರ್ ಖಾದ್ರಿ, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆವಿಕಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ್, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲರಾಜು ಹಾಗೂ ನೌಕರರ ಸಂಘದ ಅಧ್ಯಕ್ಷ ಕೆ.ಬಲರಾಮ್, ಪ್ರಧಾನ ಕಾರ್ಯದರ್ಶಿ ಶಿವರಾಂ ಹಾಗೂ ಕೆಪಿಟಿಸಿಎಲ್ ಹಾಗೂ ವಿವಿಧ ಎಸ್ಕಾಂಗಳ ನೌಕರರು ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ನಿಲ್ಲದ ಚಿನ್ನದ ನಾಗಾಲೋಟ : 1.61ಲಕ್ಷ ರೂ.ತಲುಪಿದ ಬಂಗಾರ

1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…

38 mins ago

ಯುವಕನ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…

48 mins ago

ಪಾದಯಾತ್ರೆ ವೇಳೆ ಚಿರತೆ ದಾಳಿಗೆ ವ್ಯಕ್ತಿ ಬಲಿ ಪ್ರಕರಣ : ಚಿರತೆ ಸೆರೆಗೆ ಅರಣ್ಯ ಇಲಾಖೆ ಕ್ರಮ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…

2 hours ago

ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣ : ಜಿ.ಟಿ.ದಿನೇಶ್‌ಗೆ ಹೈಕೋರ್ಟ್ ಶಾಕ್

ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…

3 hours ago

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

3 hours ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

3 hours ago