ರಾಜ್ಯ

ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಕೆಗೆ ಕೆಂದ್ರಕ್ಕೆ ಸಚಿವ ಚಲುವರಾಯಸ್ವಾಮಿ ಮನವಿ

ಬೆಂಗಳೂರು : ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬಾರದೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದರು.

ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚವ್ಹಾಣ್ ರವರು ಗುರುವಾರ ಮಧ್ಯಾಹ್ನ ಎಲ್ಲಾ ರಾಜ್ಯಗಳ ಕೃಷಿ ಸಚಿವರೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಕರ್ನಾಟಕದಲ್ಲಿ ಸರಬರಾಜು ಕೊರತೆಯಿಂದ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಸವಿವರವಾಗಿ ಗಮನ ಸೆಳೆದು ಶೀಘ್ರ ಬಾಕಿ ಪೂರೈಕೆಗೆ ಬೇಡಿಕೆ ಸಲ್ಲಿಸಿದರು.

ಕರ್ನಾಟಕ ವಿಧಾನಸಭೆ ಹಾಗೂ ವಿಧಾನಪರಿಷತ್ತು ಕಲಾಪಗಳಲ್ಲಿ ಎರಡು ದಿನ ರಸಗೊಬ್ಬರ ಕೊರತೆ ಬಗ್ಗೆ ನಡೆದ ಗಂಭೀರ ಚರ್ಚೆಗಳ ವಿಚಾರ ಹಾಗೂ ರಾಜ್ಯದ ಬೇಡಿಕೆ ಕೇಂದ್ರದ ಹಂಚಿಕೆ ಮತ್ತು ಪೂರೈಕೆ ಪ್ರಮಾಣದ ಬಗ್ಗೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದಲ್ಲಿ ಖರೀಫ್ ವಿಕಸಿತ ಕೃಷಿ ಅಭಿಯಾನವನ್ನು ಯಶಸ್ವಿಯಾಗಿ ನಡೆಸಲಾಗಿದೆ. ನಮ್ಮ ರಾಜ್ಯದಲ್ಲಿ ಜುಲೈ ತಿಂಗಳಿಗೆ 1.27 ಲಕ್ಷ ಟನ್ ಯೂರಿಯಾ ಮತ್ತು ಆಗಸ್ಟ್ ತಿಂಗಳಿಗೆ 1.40 ಲಕ್ಷ ಟನ್ ಯೂರಿಯಾ ಕೊರತೆಯಿದೆ. ಒಟ್ಟಾರೆಯಾಗಿ 2.67 ಲಕ್ಷ ಟನ್ ಯೂರಿಯಾವನ್ನು ಆದಷ್ಟು ಬೇಗ ಕರ್ನಾಟಕಕ್ಕೆ ವಿತರಿಸಲು ಅಗತ್ಯವಿದೆ ಎಂದು ಕೃಷಿ ಸಚಿವರು ವಿವರ ಒದಗಿಸಿದರು.

ಆಗಸ್ಟ್-ಸೆಪ್ಟೆಂಬರ್ ಮಾಹೆಯಲ್ಲಿ ಬಿತ್ತನೆ ಕಾರ್ಯ ಹೆಚ್ಚಿನ ಪ್ರಮಾಣದಲ್ಲಿ ನಡೆಯುವುದರಿಂದ ರೈತರಿಗೆ ಅಗತ್ಯವಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರವನ್ನು ಪೂರೈಸಬೇಕಿದೆ. ವಿಳಂಭವಾದಲ್ಲಿ ರೈತರ ಬೆಳೆಗೆ ಹಾನಿಯಾಗುವ ಸಂಭವವಿರುತ್ತದೆ. ಬಹುತೇಕ ಬೆಳೆಗಳಿಗೆ ಮೇಲುಗೊಬ್ಬರವಾಗಿ ಯುರಿಯಾ ಬಳಸುವುದರಿಂದ ತುರ್ತಾಗಿ ಮನವಿ ಮಾಡಿದರು. ನಾವು ರಬಿ ಹಂಗಾಮಿನ ಗೊಬ್ಬರದ ಅವಶ್ಯಕತೆಗಳ ವಿವರ ಸಲ್ಲಿಸಿದ್ದು ಅದರಂತೆ ಹಂಚಿಕೆ ಮಾಡುವಂತೆಯೂ ಅವರು ವಿನಂತಿಸಿದರು.

ಇದೇ ವೇಳೆ ಇಂದೇ ತಾವು ರಸಗೊಬ್ಬರ ಇಲಾಖೆ ಕಾರ್ಯದರ್ಶಿಯವರೊಂದಿಗೆ ಮಾತನಾಡಿ ಆದಷ್ಟು ಬೇಗ ಕರ್ನಾಟಕಕ್ಕೆ ಬಾಕಿ ರಸಗೊಬ್ಬರ ಪೂರೈಕೆಯ ವ್ಯವಸ್ಥೆ ಮಾಡುವುದಾಗಿ ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚವ್ಹಾಣ್ ಭರವಸೆ ನೀಡಿದರು.

ಇದೇ ಸಂದರ್ಭದಲ್ಲಿ ಉತ್ತರಪ್ರದೇಶ ರಾಜ್ಯ ಕೃಷಿ ಸಚಿವರಾದ ಸೂರ್ಯ ಪ್ರತಾಪ್ ಶಾಹಿ ಅವರು ಮಾತನಾಡಿ ರಾಜ್ಯಕ್ಕೆ 18 ಲಕ್ಷ ಮೆ.ಟನ್ ಯುರಿಯಾ ಹಂಚಿಕೆ ಮಾಡಲಾಗಿದ್ದು ಈ ವರೆಗೆ ಕೇವಲ 12 ಲಕ್ಷ ಮೆ.ಟನ್ ಪೂರೈಕೆಯಾಗಿದೆ. ಇನ್ನು 6 ಲಕ್ಷ ಮೆ.ಟನ್ ವ್ಯತ್ಯಾಸವಿದ್ದು ಸಮಸ್ಯೆ ತಲೆದೂರಿದೆ. ಆದಷ್ಟು ಬೇಗ ಬಾಕಿ ಪೂರೈಕೆ ಮಾಡುವಂತೆ ಮನವಿ ಮಾಡಿದರು.

ಬಿಹಾರ, ಉತ್ತರಖಾಂಡ, ಛತ್ತೀಸ್ಘಡ ಸೇರಿದಂತೆ ವಿವಿಧ ರಾಜ್ಯಗಳ ಕೃಷಿ ಸಚಿವರೂ ಸಹ ತಮ್ಮ ರಾಜ್ಯಗಳಲ್ಲಿ ಉಂಟಾಗಿರುವ ಯುರಿಯಾ ಮತ್ತು ಡಿ.ಎ.ಪಿ ರಸಗೊಬ್ಬರ ಕೊರತೆ ಸಮಸ್ಯೆಗಳ ಬಗ್ಗೆ ಕೇಂದ್ರ ಸಚಿವರ ಗಮನ ಸೆಳೆದರು.

ರಾಜ್ಯದಲ್ಲಿ ಯಶಸ್ವಿಯಾಗಿ ರಬಿ ವಿಕಸಿತ ಕೃಷಿ ಅಭಿಯಾನ ನಡೆಯುತ್ತಿದ್ದು ತಾವು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸೆಪ್ಟೆಂಬರ್ 15 ಮತ್ತು 16 ರಂದು ನಡೆಯುವ ರಬಿ ಸಮ್ಮೇಳನದಲ್ಲಿ ಭಾಗವಹಿಸುವುದಾಗಿ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವರಿಗೆ ತಿಳಿಸಿದರು.

ಈ ಶೈಕ್ಷಣಿಕ ವರ್ಷದಿಂದಾಗಿ ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಿದ್ದು ಕೇಂದ್ರ ಐ.ಸಿ.ಎ.ಆರ್ ಮಾನ್ಯತೆಗೆ ಒಳಪಡಿಸಿ ಅಭಿವೃದ್ಧಿ ಅನುದಾನಗಳನ್ನು ಬಿಡುಗಡೆ ಮಾಡಿ, ಐಸಿಎಆರ್ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿ ಮತ್ತು ಯುಎಎಸ್ ಬೆಂಗಳೂರು ನಿಂದ ಎಲ್ಲಾ ಕೆವಿಕೆ ಮತ್ತು ಎಐಸಿಆರ್ಪಿ ಕೇಂದ್ರಗಳನ್ನು ವರ್ಗಾಯಿಸುವಂತೆ ಮನವಿ ಮಾಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

3 mins ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

6 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

10 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

19 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago