ರಾಜ್ಯ

ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಏರಿಕೆ : ಕೃಷಿ ಸಚಿವರಿಂದ ಗುಡ್‌ ನ್ಯೂಸ್

ಬೆಳಗಾವಿ : ರಾಜ್ಯದಲ್ಲಿ ಪೆಟ್ರೋಲ್‌ ಡಿಸೇಲ್‌ ಹಾಗೂ ಹಾಲಿನ ದರ ಏರಿಕೆ ಬೆನ್ನಲ್ಲೆ ವಿರೋಧ ಪಕ್ಷಗಳು ಸೇರಿದಂತೆ ಸಾರ್ವಜನಿಕರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಕೂಡ ನಡೆಯುತ್ತಿವೆ.

ಈ ವಿಚಾರವಾಗಿ ಕೃಷಿ ಸಚಿವ ಎನ್‌ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ಅಭಿವೃದ್ಧಿ ಕೆಲಸ ಆಗುವಾಗ ಬೆಲೆ ಏರಿಕೆ ಮಾಡುವುದು ಸಹಜ. ಇದರಿಂದ ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳುವ ಮೂಲಕ ರೈತರಿಗೆ ಸಿಹಿ ಸುದ್ದಿ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯಾವುದೇ ಸರ್ಕಾರ ಬಂದರೂ ಬೆಲೆ ಏರಿಕೆ ಆಗುತ್ತದೆ. ಸರ್ಕಾರ ತೆರಿಗೆ ಹಾಕದೆ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಅವೈಜ್ಞಾನಿಕವಾಗಿ ದರ ಏರಿಕೆ ಮಾಡಿದರೆ ತಪ್ಪು ಅಂತ ಪ್ರಶ್ನೆ ಮಾಡಬಹುದು. ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಅನುದಾನ ಕೂಡ ಕೊಟ್ಟಿಲ್ಲ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ದರ ಕಡಿಮೆ ಇದೆ. ಒಂದು ಲೀಟರ್​ಗೆ ಹೆಚ್ಚುವರಿಯಾಗಿ 50 ಎಂಎಲ್​​ ಹಾಲು ನೀಡುತ್ತಿರುವುದರಿಂದ 2 ರೂ. ಹೆಚ್ಚಳ ಮಾಡಲಾಗಿದೆ. ರೈತರಿಗೆ ಕೊಡುವ ಸಬ್ಸಿಡಿ ಮತ್ತು ಅನುದಾನ ಕೂಡ ಏರಿಕೆ ಆಗುತ್ತದೆ ಎಂದು ಹೇಳಿದರು.

ಇನ್ನು ಇದೇ ಸಂದರ್ಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಅವರಿಗೆ ಕಾಣಿಕೆ ನೀಡಲು ದರ ಏರಿಕೆ ಮಾಡಲಾಗಿದೆ ಎಂಬ ಪ್ರತಿಪಕ್ಷಗಳ ಆರೋಪದ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯದಲ್ಲಿ ಆಡಳಿತ ಮಾಡಿದಾಗ ಎಷ್ಟು ಕೊಟ್ಟಿದೆ..? ಬಿಜೆಪಿ ಅಧಿಕಾರದಲ್ಲಿದ್ದಾಗ ಬಿ.ಎಸ್​ ಯಡಿಯೂರಪ್ಪ ಎಷ್ಟು ಕೊಟ್ಟಿದ್ದಾರೆ, ನಾವು ಬಿಜೆಪಿ ರೀತಿ ಮಾಡಿಲ್ಲ ಎಂದು ಟಾಂಗ್‌ ಕೊಟ್ಟಿದ್ದಾರೆ.

 

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಡಿ.21ರಿಂದ ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ

ಪ್ರತಿದಿನ ರಾತ್ರಿ ಅರಮನೆಗೆ ದೀಪಾಲಂಕಾರ ಹೂವಿನಿಂದ ಶೃಂಗೇರಿ ದೇವಸ್ಥಾನದ ಮಾದರಿ ನಿರ್ಮಾಣ ಪುಷ್ಪ ಪ್ರಿಯರ ಕಣ್ಮನ ಸೆಳೆಯಲಿರುವ ವಿವಿಧ ಮಾದರಿಗಳು…

2 mins ago

ಪುಕ್ಕಟೆ ಪಾರ್ಕಿಂಗ್ ಮಾಡಬೇಕೆ? ಇಲ್ಲಿಗೆ ಬನ್ನಿ!

ಎಸ್.ಎಸ್.ಭಟ್ ಹಾಗಂತ ಇಲ್ಲಿ ಫಲಕ ಹಾಕಿಲ್ಲ, ವಾಹನ ನಿಲ್ಲುವುದು ತಪ್ಪುತ್ತಿಲ್ಲ; ಇದು ನಂಜನಗೂಡಿನ ತಾಯಿ-ಮಕ್ಕಳ ಆಸ್ಪತ್ರೆ ಆವರಣದ ಸ್ಥಿತಿ ನಂಜನಗೂಡು:…

9 mins ago

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ…

15 mins ago

ಆಕಸ್ಮಿಕ ಬೆಂಕಿ : ಒಕ್ಕಣೆ ಕಣದ ರಾಗಿ ಫಸಲು ನಾಸ

ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…

11 hours ago

ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರು-ಪೇರು ; ಸದನ ಕಲಾಪಗಳಿಂದ ದೂರ ಉಳಿದ ಸಿಎಂ

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…

11 hours ago