ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ ಎನ್ನಲಾಗ್ತಿದೆ. ಹೀಗಾಗಿ ಸಚಿವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆಗೆ ಸರಿಯಾಗಿ ಸ್ಪಂದಿಸದೆ ಇರುವ ಕಾರಣ ತೀವ್ರ ನಿಗಾ ಘಟಕದಲ್ಲಿ ಸಚಿವ ಚಿಕಿತ್ಸೆ ಮುಂದುವರೆದಿದೆ. ಕಳೆದ ರಾತ್ರಿ 9.30 ರ ಸುಮಾರಿಗೆ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಕಂಡು ಬಂದ ಹಿನ್ನಲೆಯಲ್ಲಿ ಡಾ.ವೆಂಕಟಗಿರಿ ನೇತೃತ್ವದ ವೈದ್ಯರ ತಂಡ ತೀವ್ರ ನಿಗಾ ವಹಿಸಿದೆ. ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ ಅಡಿಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ಸಚಿವ ಡಿ.ಸುಧಾಕರ್ ಅವರು ಶ್ವಾಸಕೋಶದ ಸೋಂಕಿನೊಂದಿಗೆ ಉಸಿರಾಟದ ತೊಂದರೆಯನ್ನೂ ಎದುರಿಸುತ್ತಿದ್ದಾರೆ ಎನ್ನಲಾಗಿದೆ. ಅವರಿಗೆ ಆಮ್ಲಜನಕ ನೆರವು ನೀಡಲಾಗುತ್ತಿದೆ. ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿಲ್ಲ. ಆದ್ದರಿಂದ, ವೈದ್ಯರ ತಂಡವೊಂದು ಅವರನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತಿದೆ. ಮುಂದಿನ 24 ರಿಂದ 48 ಗಂಟೆಗಳು ನಿರ್ಣಾಯಕವಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…