ಮಂಗಳೂರು: ಕೊಲೆಯಾದ ಪ್ರತಿಯೊಬ್ಬರ ಮನೆಗೂ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊಲೆಗಳು ಆಗುತ್ತಲೇ ಇರುತ್ತವೆ. ಆದರೆ ಕೊಲೆಯಾದ ಪ್ರತಿಯೊಬ್ಬರ ಮನೆಗೆ ಸಚಿವರು ಹೋಗಲೇಬೇಕು ಎಂದೇನೂ ಇಲ್ಲ. ಕೊಲೆ ಏಕೆ ಆಗಿದೆ ಎಂಬುದು ಮುಖ್ಯ ಅಷ್ಟೇ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರನ್ನು ಬಂಧಿಸುವ ಮೂಲಕ ಸರ್ಕಾರ ತನ್ನ ಜವಾಬ್ದಾರಿ ನಿರ್ವಹಿಸಿದೆ. ಯಾರಿಗೂ ರಕ್ಷಣೆ ಕೊಡುವ ಪ್ರಶ್ನೆಯೇ ಇಲ್ಲ. ಯಾರು ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಿದ್ದಾರೆ ಅವರನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ತನಿಖೆ ನಿಷ್ಪಕ್ಷಪಾತವಾಗಿ ನಡೆಯುತ್ತಿದೆ. ಬಿಜೆಪಿಯವರು ಊಹಾಪೋಹದ ಹೇಳಿಕೆ ನೀಡುವುದನ್ನು ಬಿಟ್ಟು ತಮ್ಮ ಬಳಿ ಸ್ಪಷ್ಟ ಮಾಹಿತಿ ಇದ್ದರೆ ನೀಡಲಿ ಎಂದು ತಿರುಗೇಟು ಕೊಟ್ಟರು.
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…