Mysore
23
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ರಾಜ್ಯಪಾಲರ ವಿರುದ್ಧ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿ

ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರು ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರ್ಕಾವತಿ ಡಿನೋಟಿಫಿಕೇಷನ್‌ ಕೇಸ್‌ ಕೆಂಪಣ್ಣ ಆಯೋಗದ ವರದಿಯನ್ನು ರಾಜ್ಯಪಾಲರು ಕೇಳಿದ್ದಾರೆ.

ರಾಜ್ಯಪಾಲರ ನಡೆ ನೋಡಿದರೆ ಇವರೇ ವಿರೋಧ ಪಕ್ಷದ ನಾಯಕರ ರೀತಿ ನಡೆದುಕೊಳ್ಳುತ್ತಿದ್ದಾರೆ. ರಾಜ್ಯಪಾಲರು ಈ ರೀತಿ ನಡೆದುಕೊಳ್ಳಬಾರದು ಎಂದು ಕಿಡಿಕಾರಿದರು.

ಈ ಎಲ್ಲಾ ನಡವಳಿಕೆಗಳಿಂದ ರಾಜ್ಯಪಾಲರ ಸ್ಥಾನಕ್ಕೆ ಗೌರವ ತರುವುದಿಲ್ಲ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ವಿರುದ್ಧ ಕಿಡಿಕಾರಿದರು.

Tags:
error: Content is protected !!