ಬೆಂಗಳೂರು : ಕಮದಾಳು ಗ್ರಾಮದಲ್ಲಿ ಗ್ರಾಮಸ್ಥರು ಚಿರತೆಯನ್ನ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆಯ ಸಂಪೂರ್ಣ ವರದಿ ನೀಡುವಂತೆ ಸಚಿವ ಈಶ್ವರ್ ಖಂಡ್ರೆ ಅರಣ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದಾರೆ.
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿ ಕಮದಾಳು ಗ್ರಾಮದಲ್ಲಿ ಓರ್ವನ ಮೇಲೆ ಚಿರತೆ ದಾಳಿ ಮಾಡಿತ್ತು. ವಿಚಾರ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ವಲಯದ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆದಿದ್ದರು. ಅಲ್ಲದೆ ಗ್ರಾಮಠಾಣದ ಪಕ್ಕದ ಕಲ್ಲು ಬಂಡೆ ಇರುವ ಗುಡ್ಡದಲ್ಲಿ ಚಿರತೆ ಇರುವ ಬಗ್ಗೆ ಖಾತರಿ ಪಡಿಸಿಕೊಂಡು ಚಿರತೆ ಸೆರೆಗೆ ಕಾರ್ಯಾಚರಣೆ ಶುರು ಮಾಡಿದರು. ಇನ್ನು ಚಿರತೆ ಇದೆ ಎಂದು ಗೊತ್ತಾಗುತ್ತಿದ್ದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಕೂಡ ಸ್ಥಳದಲ್ಲಿ ಜಮಾಯಿಸಿದರು.
ಈ ವೇಳೆ ಚಿರತೆ ಮೂರು ಜನರ ಮೇಲೆ ದಾಳಿ ಮಾಡಿತು. ತಕ್ಷಣ ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸ್ಥಳಕ್ಕೆ ಶಾಸಕರು, ಪೊಲೀಸರು, ಸಿಪಿಐ ಮತ್ತು ಕಂದಾಯ ಇಲಾಖೆಯ ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿದ್ದರು. ಇನ್ನು ಪ್ರಕರಣದ ಎಲ್ಲಾ ಬೆಳವಣಿಗೆಗಳ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ಪಡೆದಿದ್ದರು. ಚಿರತೆ ಸೆರೆಗೆ ಕಾರ್ಯಾಚರಣೆ ನಡೆಯುತ್ತಿದ್ದ ವೇಳೆ ಉದ್ವೇಗಗೊಂಡ ಜನರು ಚಿರತೆ ಇರುವ ಸ್ಥಳಕ್ಕೆ ನುಗ್ಗಿ ಅದನ್ನ ಕೊಲೆ ಮಾಡಿದರು.
ಅರಣ್ಯ ಅಧಿಕಾರಿಗಳ ಸಮ್ಮುಖದಲ್ಲೆ ಸಾರ್ವಜನಿಕರು ಚಿರತೆಯನ್ನು ಹತ್ಯೆ ಮಾಡಿದ್ದಾರೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ ಚಿರತೆಯನ್ನು ಸೆರೆಹಿಡಿಯಲು ಹಾಗೂ ಹತ್ಯೆ ತಡೆಯಲು ವಿಫಲವಾದ ಕುರಿತು ಶೀಘ್ರವಾಗಿ ಇಲಾಖೆವತಿಯಿಂದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಶೀಘ್ರವಾಗಿ ವರದಿ ಸಲ್ಲಿಸುವಂತೆ ಸಚಿವ ಈಶ್ವರ್ ಖಂಡ್ರೆ ಖಡಕ್ ಸೂಚನೆ ಕೊಟ್ಟಿದ್ದಾರೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…