ರಾಜ್ಯ

ವಿವಿಧ ಕಂಪನಿಗಳಿಗೆ ನೀಡಿದ್ದ ಗುತ್ತಿಗೆ ಅರಣ್ಯ ಭೂಮಿ ವಶಕ್ಕೆ ಕ್ರಮ: ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ

ಬೆಳಗಾವಿ: ಬ್ರಿಟಿಷರ ಕಾಲದಲ್ಲಿ ಕೊಡಗು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ 9 ಕಂಪನಿಗಳಿಗೆ ಗುತ್ತಿಗೆ ನೀಡಿದ್ದ ಅರಣ್ಯ ಭೂಮಿಯನ್ನು ವಶಕ್ಕೆ ಪಡೆಯಲು ಸರ್ಕಾರ ಮುಂದಾಗಿದೆ.

ಒಟ್ಟು 5,150 ಎಕರೆ ಅರಣ್ಯ ಭೂಮಿಯನ್ನು ಮರು ವಶಕ್ಕೆ ಪಡೆಯಲು ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ವಿಧಾನಪರಿಷತ್‌ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಸಚಿವರು, ಕೊಡಗು, ಚಾಮರಾಜನಗದರಲ್ಲಿ ಒಟ್ಟು 5150 ಎಕರೆ ಜಮೀನನ್ನು ಗುತ್ತಿಗೆ ನೀಡಲಾಗಿದೆ ಎಂದು ವಿವರಣೆ ನೀಡಿದರು.

ಯಾವ ಕಂಪನಿಗಳು ಕೂಡ ಹಲವು ದಶಕಗಳಿಂದ ಗುತ್ತಿಗೆ ಹಣವನ್ನು ಪಾವತಿಸಿಲ್ಲ. ಈ 9 ಕಂಪನಿಗಳಿಂದ ಇಲಾಖೆಗೆ ಬಡ್ಡಿ ಮತ್ತು ದಂಡ ಸೇರಿದಂತೆ ಒಟ್ಟು 1492.18 ಕೋಟಿ ರೂ ಬರಬೇಕಿದೆ ಎಂದು ತಿಳಿಸಿದರು.

ನಾನು ಸಚಿವನಾದ ಬಳಿಕ ಗುತ್ತಿಗೆ ಅರಣ್ಯ ಭೂಮಿಯ ಮರು ವಶಕ್ಕೆ ಪಡೆಯಲು ಐದು ಜನ ಸದಸ್ಯರ ಕಾರ್ಯಪಡೆಯನ್ನು ರಚಿಸಲಾಗಿದೆ. ಈ ಪಡೆಯು ಅಡ್ವೊಕೇಟ್‌ ಜನರಲ್‌ ಅವರೊಂದಿಗೆ ಸಮಾಲೋಚನೆ ನಡೆಸಿ ದಾಖಲೆಗಳನ್ನು ಒಗ್ಗೂಡಿಸಿ ಭೂಮಿ ಮರಳಿ ಪಡೆಯಲು ಪ್ರಯತ್ನ ಮಾಡುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

4 hours ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

4 hours ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

4 hours ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

4 hours ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

4 hours ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

5 hours ago