Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ಮೃಗಾಲಯ ಸಂದರ್ಶಕರಿಗೆ ರಿಯಾಯಿತಿ ದರದಲ್ಲಿ ಸಸಿ ನೀಡಲು ಈಶ್ವರ್‌ ಖಂಡ್ರೆ ಸೂಚನೆ

ಬನ್ನೇರುಘಟ್ಟ : ರಾಜ್ಯದ ಮೃಗಾಲಯಗಳು ವನ್ಯಜೀವಿಗಳ ಪಾಲನೆಗೆ ಹೆಸರಾಗಿದ್ದು, ಇದು ಜ್ಞಾನಮಂದಿರವೂ ಆಗಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟರು.

ಬನ್ನೇರುಘಟ್ಟದ ಜೈವಿಕ ಉದ್ಯಾನದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಜೈವಿಕ ಉದ್ಯಾನಕ್ಕೆ ಬರುವ ಜನರು ವನ್ಯ ಜೀವಿಗಳನ್ನು ನೋಡಿ ಸಂತೋಷ ಪಡುತ್ತಾರೆ. ಜೊತೆಗೆ ಅವರಿಗೆ ಇಲ್ಲಿರುವ ಪ್ರತಿಯೊಂದು ಪ್ರಬೇಧದ ವೃಕ್ಷಗಳ ಬಗ್ಗೆ ತಿಳಿಸಿ ಜನರು ಕನಿಷ್ಠ 10 ಪ್ರಬೇಧದ ವೃಕ್ಷ ಗುರುತಿಸುವಂತೆ ಜನರಿಗೆ ಅರಿವು ಮೂಡಿಸಬೇಕು ಎಂದರು.

ಅಲ್ಲದೆ ಮೃಗಾಲಯಕ್ಕೆ ಬರುವ ಪ್ರತಿಯೊಬ್ಬರಿಗೂ ಪ್ರಾಣವಾಯು- ಆಮ್ಲಜನಕ ನೀಡುವ ವೃಕ್ಷಗಳ ಮಹತ್ವದ ಬಗ್ಗೆ ತಿಳಿಸಬೇಕು ಜೊತೆಗೆ ಅವರು ಮನೆಗೆ ತೆರಳುವಾಗ ಒಂದು ಸಸಿ ಖರೀದಿಸಿ ತೆಗೆದುಕೊಂಡು ಹೋಗಿ ತಮ್ಮ ಮನೆಯ ಮುಂದೆ ನೆಟ್ಟು, ಪೋಷಿಸುವಂತೆ ಅವರನ್ನು ಪ್ರೇರೇಪಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಸಸಿಗಳನ್ನು ನೀಡುವ ರೀತಿಯಲ್ಲೇ ಮೃಗಾಲಯಕ್ಕೆ ಬರುವ ಸಂದರ್ಶಕರಿಗೂ ರಿಯಾಯಿತಿ ದರದಲ್ಲಿ ಸಸಿಗಳನ್ನು ಪೂರೈಸಬೇಕು ಎಂದು ಅರಣ್ಯ ಸಚಿವರು ಸೂಚನೆ ನೀಡಿದರು.

Tags:
error: Content is protected !!