ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಗುತ್ತಿಗೆದಾರರ ಹತ್ತಿರ ಕಮಿಷನ್ ಪಡೆದಿದ್ದರೆ, ಸಾಕ್ಷಿ ಆಧಾರ ಇಟ್ಟುಕೊಂಡು ಅವರು ಮಾಡಿರುವ ಆರೋಪವನ್ನು ಸಾಬೀತು ಮಾಡಲಿ. ಅದನ್ನು ಬಿಟ್ಟು ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆದ ಹಾಗೇ ಮಾತನಾಡುವುದಲ್ಲ ಎಂದು ಕಿಡಿಕಾರಿದ್ದಾರೆ.
ಗುತ್ತಿಗೆದಾರರು ಮಾಡಿರುವ ಕೆಲಸಕ್ಕೆ ರಾಜ್ಯ ಸರ್ಕಾರ 38 ಸಾವಿರ ಕೋಟಿ ಬಾಕಿ ಇರಿಸಿಕೊಂಡಿದೆ ಎಂದು ಹೇಳ್ತಾರೆ. ಎಲ್ಲಿದೆ ಬಾಕಿ? ಬಿಜೆಪಿ 10 ಸಾವಿರ ಕೋಟಿ ಮಂಜೂರು ಮಾಡಿ ಸುಮ್ಮನೆ ಹೊರಟು ಹೋಯಿತು. ಈಗ ಆರೋಪ ಮಾಡಿದರೆ ಹೇಗೆ ಎಂದು ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…